ರಾಜ್ಯದಲ್ಲಿ 292 ಹೊಸ ಕೊರೋನಾ ಕೇಸ್ ಪತ್ತೆ, ಸೋಂಕಿನ ಪ್ರಮಾಣ ಶೇ. 0.27
* ರಾಜ್ಯದಲ್ಲಿ 292 ಹೊಸ ಕೊರೋನಾ ಕೇಸ್ ಪತ್ತೆ
* ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 3.76
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ
ಬೆಂಗಳೂರು, (ಅ.31): ಕರ್ನಾಟಕದಲ್ಲಿ(Karnataka) ಇಂದು (ಅ.31) 292 ಹೊಸ ಕೊರೋನಾ ವೈರಸ್ (Coronavirus) ಕೇಸ್ ಪತ್ತೆಯಾಗಿದ್ದು,11 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದ್ರೆ, ಮೃತಪಟ್ಟವರ ಒಟ್ಟು ಸಂಖ್ಯೆ 38,082ಕ್ಕೆ ಏರಿಕೆಯಾಗಿದೆ.
345 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಪೈಕಿ 29,41,578 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೀಪಾವಳಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ
ರಾಜ್ಯದಲ್ಲಿ ಸದ್ಯ 8,644 ಸಕ್ರಿಯ ಪ್ರಕರಣಗಳಿವೆ. ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 3.76 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 137 ಹೊಸ ಪ್ರಕರಣ ಪತ್ತೆಯಾಗಿದ್ದು, 204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಧಾರವಾಡ, ಗದಗ್, ಕೊಪ್ಪಳ, ರಾಯಚೂರು, ರಾಮನಗರದಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
ಜಿಲ್ಲಾವಾರು ಕೊರೋನಾ ಪ್ರಕರಣಗಳ ಸಂಖ್ಯೆ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 24, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 26, ಹಾವೇರಿ 1, ಕಲಬುರಗಿ 3, ಕೊಡಗು 11, ಕೋಲಾರ 2, ಕೊಪ್ಪಳ 0, ಮಂಡ್ಯ 8, ಮೈಸೂರು 33, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 17, ಉಡುಪಿ 2, ಉತ್ತರ ಕನ್ನಡ 6, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೋವಿಡ್‌ಗೆ ಮಾತ್ರೆ ಸಿದ್ಧ
ಕೋವಿಡ್ (Coronavirus) ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಗುಳಿಗೆ (Tablet) ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ. ಅಮೆರಿಕ ಮೂಲದ ಮೆರ್ಕ್ ಆ್ಯಂಡ್ ಕೋ ಅಭಿವೃದ್ಧಿಪಡಿಸಿರುವ ಮೋಲ್ನುಪಿರಾವಿರ್ ಗುಳಿಗೆಯನ್ನು ಭಾರತದಲ್ಲೂ ಉತ್ಪಾದಿಸಲು ಅನುಮತಿ ಕೋರಿ ಹೈದ್ರಾಬಾದ್ (Hyderabad) ಮೂಲದ ಆಪ್ಟಿಮಸ್ ಫಾರ್ಮಾ, ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ಈ ಗುಳಿಗೆ ಬಳಸಲು ಅಮೆರಿಕ(USA) ಸರ್ಕಾರ ಇನ್ನೂ ಅಂತಿಮ ಅನುಮೋದನೆ ನೀಡಿಲ್ಲ.