* ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೋನಾ* ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 2984 ಜನರಿಗೆ ಸೋಂಕು ತ * ಶೇ.1.92ಕ್ಕೆ ಕುಸಿದ ಪಾಸಿಟಿವಿಟಿ ದರ

ಬೆಂಗಳೂರು, (ಜುಲೈ.02): ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 2984 ಜನರಿಗೆ ಸೋಂಕು ತಗುಲಿದ್ದು, 88 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಒಟ್ಟು ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 35,222 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ಕೊರತೆ, ಜನರ ಪರದಾಟ

 ಕಳೆದ 24 ಗಂಟೆಗಳಲ್ಲಿ 14,337 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂಇದಗೆ ಇದುವರೆಗೆ 27,60,881 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಹೊಸದಾಗಿ 593 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 11 ಸೋಂಕಿತರು ಮೃತಪಟ್ಟಿದ್ದು, 23,424 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ 53,871 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 1.92ಕ್ಕೆ ಇಳಿದಿದೆ.