ನ.1ರ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡರು ಕರಾಳ ದಿನ ಆಚರಿಸುವ ಸಾಧ್ಯತೆ ಇರುವುದರಿಂದ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಒಬ್ಬ ಸಂಸದರಿಗೆ ಅ.31ರಿಂದ ನ.2ರ ಸಂಜೆವರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯ ಗಡಿಪ್ರವೇಶಿಸದಂತೆ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೋಮವಾರ ತಡರಾತ್ರಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ (ಅ.31) : ನ.1ರ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡರು ಕರಾಳ ದಿನ ಆಚರಿಸುವ ಸಾಧ್ಯತೆ ಇರುವುದರಿಂದ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಒಬ್ಬ ಸಂಸದರಿಗೆ ಅ.31ರಿಂದ ನ.2ರ ಸಂಜೆವರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯ ಗಡಿಪ್ರವೇಶಿಸದಂತೆ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೋಮವಾರ ತಡರಾತ್ರಿ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ನಗರ ಸೇರಿ ಜಿಲ್ಲಾದ್ಯಂತ ಕನ್ನಡಪರ ಸಂಘಟನೆಗಳು ಅದ್ದೂರಿ ರಾಜ್ಯೋತ್ಸವ ಆಚರಣೆಗೆ ತಯಾರಿ ನಡೆಸಿವೆ. ಆದರೆ, ರಾಜ್ಯೋತ್ಸವ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಕರಾಳ ದಿನಾಚರಣೆ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರಾದ ಶಂಭುರಾಜ ದೇಸಾಯಿ, ಚಂದ್ರಕಾಂತ ಪಾಟೀಲ, ದೀಪಕ್‌ ಕೇಸರಕರ್‌ ಮತ್ತು ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಗಡಿ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ಗುಡುಗಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಿಷೇಧಾಜ್ಞೆಗೆ ಒಳಗಾಗಿರುವ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಸಂಸದರು ರಾಜ್ಯೋತ್ಸವದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಇವರು ಬೆಳಗಾವಿ ಜಿಲ್ಲೆ ಗಡಿ ಪ್ರವೇಶಿಸಿದರೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಇದರಿಂದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಎಂಇಎಸ್ ಪುಂಡರ ಮಧ್ಯೆ ಘರ್ಷಣೆಯಾಗುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.