ಮೈಸೂರು[ಫೆ.04]: ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ 16 ವರ್ಷದ ಬಾಲಕಿ ಮೇಲೆ ಮೂವರು ಪಾದ್ರಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಮೂವರು ಪಾದ್ರಿಗಳ ವಿರುದ್ಧ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಒಬ್ಬರು, ಮಂಗಳೂರಿನ ಇಬ್ಬರು ಸೇರಿದಂತೆ ಮೂವರು ಪಾದ್ರಿಗಳು ಬಾಲಕಿ ಮೇಲೆ ಮಂಗಳೂರಿನಲ್ಲಿ ಅತ್ಯಾಚಾರ ಎಸಗಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಎನ್.ಆರ್.ಠಾಣೆಯ ಪೊಲೀ ಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.