Asianet Suvarna News Asianet Suvarna News

ಚಾಲಕರ ಖಾತೆಗೆ 3,000 ರು. ಪರಿಹಾರ ನೇರ ವರ್ಗ: ಸರ್ಕಾರ

* ಅರ್ಜಿ ಸ್ವೀಕರಿಸಲು ತಂತ್ರಾಂಶ ಅಭಿವೃದ್ಧಿ
* ಅನ್ಯ ಮಾರ್ಗದಲ್ಲಿ ಅರ್ಜಿ ಸಲ್ಲಿಸಬೇಕಿಲ್ಲ
* ಪರಿಹಾರ ಧನ ಚಾಲಕರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾವಣೆ

3000 Compensation Direct Credit to Drivers Account Says State Government grg
Author
Bengaluru, First Published May 22, 2021, 9:28 AM IST

ಬೆಂಗಳೂರು(ಮೇ.22): ಕೊರೋನಾ ಸೆಮಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಆಟೋ, ಕ್ಯಾಬ್‌, ಮ್ಯಾಕ್ಸಿ ಕ್ಯಾಬ್‌ ಚಾಲಕರಿಗೆ ಘೋಷಿಸಿರುವ 3 ಸಾವಿರ ರು. ಪರಿಹಾರ ಮೊತ್ತವನ್ನು ಆನ್‌ಲೈನ್‌ ಮೂಲಕ ಅರ್ಹ ಚಾಲಕರ ಖಾತೆಗೆ ನೇರವಾಗಿ ಪಾವತಿಸಲು ಸರ್ಕಾರ ತೀರ್ಮಾನಿಸಿದೆ.

ಪರವಾನಗಿ ಹೊಂದಿದ ಹಾಗೂ ನೋಂದಣಿ ಮಾಡಿದ ಅರ್ಹ ಚಾಲಕರಿಗೆ ಮಾತ್ರ ಒಂದು ಬಾರಿ ಈ ಪರಿಹಾರ ನೀಡಲಾಗುವುದು. ಈ ಪರಿಹಾರ ಧನ ನೀಡುವ ಸಂಬಂಧ ‘ಸೇವಾಸಿಂಧು’ ವೆಬ್‌ಪೋರ್ಟಲ್‌ ಮೂಲಕ ಅರ್ಜಿ ಸ್ವೀಕರಿಸಲು ಅಗತ್ಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ತಂತ್ರಾಂಶ ಕಾರ್ಯರೂಪಕ್ಕೆ ಬಂದ ಕೂಡಲೇ ಅರ್ಹ ಚಾಲಕರಿಂದ ಅರ್ಜಿ ಆಹ್ವಾನಿಸಲಾಗುವುದು.

ಕೊರೋನಾ ಸಂಕಷ್ಟ, 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ: ಯಾರಿಗೆಷ್ಟು ಪರಿಹಾರ?

ಪರಿಹಾರ ಧನವನ್ನು ಚಾಲಕರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾಯಿಸಲಾಗುವುದು. ಹೀಗಾಗಿ ಆಟೋ ರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್‌ ಚಾಲಕರು ಪರಿಹಾರ ಧನ ಕೋರಿ ಅನ್ಯ ಮಾರ್ಗದಲ್ಲಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Follow Us:
Download App:
  • android
  • ios