31 ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ: ಯಾರು, ಎಲ್ಲಿಂದ, ಎಲ್ಲಿಗೆ? ಇಲ್ಲಿದೆ ಮಾಹಿತಿ..
ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಗೃಹ ಇಲಾಖೆ ಇದೀಗ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನೂ ಟ್ರಾನ್ಸ್ಫರ್ ಮಾಡಿದೆ. ರಾಜ್ಯದ 31 ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಸಶಸ್ತ್ರ)ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು (ಜೂ.18): ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಗೃಹ ಇಲಾಖೆ ಇದೀಗ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನೂ ಟ್ರಾನ್ಸ್ಫರ್ ಮಾಡಿದೆ. ರಾಜ್ಯದ 31 ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಸಶಸ್ತ್ರ)ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ಕೆಲಸ ಮಾಡುತ್ತಿದ್ದ ಸ್ಥಳ ಹಾಗೂ ವರ್ಗಾವಣೆಗೊಂಡಿರುವ ಸ್ಥಳದ ವಿವರ ಈ ಕೆಳಗಿನಂತಿದೆ.
ಮಹಾನಗರ ಠಾಣೆಗಳಲ್ಲಿ ಸಿಬ್ಬಂದಿಗಳಿಗೆ ಆಂತರಿಕ ವರ್ಗ: ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ ಸಿಬ್ಬಂದಿಗಳ ಆಂತರಿಕ ವರ್ಗಾವಣೆ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. 5 ವರ್ಷಕ್ಕಿಂತ ಹೆಚ್ಚು ವರ್ಷ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವ ಸಿಬ್ಬಂದಿಗಳನ್ನು ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.
ಕೌನ್ಸಿಲ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಶುಕ್ರವಾರ 170ಕ್ಕೂ ಹೆಚ್ಚು ಸಿಬ್ಬಂದಿಯ ಆಂತರಿಕ ವರ್ಗಾವಣೆ ಅಂತಿಮಗೊಳಿಸಲಾಗಿದೆ. ಪೊಲೀಸ್ ಆಯುಕ್ತ ರಮನ್ ಗುಪ್ತಾ, ಡಿಸಿಪಿಗಳಾದ ರಾಜೀವ್ ಎಂ. ಗೋಪಾಲ ಬ್ಯಾಕೋಡ ಅವರ ನೇತೃತ್ವದಲ್ಲಿ ನಡೆದಿದ್ದು, ಎಎಸ್‌ಐ, ಮುಖ್ಯ ಪೇದೆ ಬೆಳಿಗ್ಗೆ, ಪೇದೆಗಳಿಗೆ ಮಧ್ಯಾಹ್ನ ಸಮಯ ನಿಗದಿಪಡಿಸಲಾಗಿತ್ತು. ಕಾನೂನು ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ 5 ವರ್ಷ 9 ತಿಂಗಳು ಕರ್ತವ್ಯ ಮಾಡಿದ್ದ ಸಿಬ್ಬಂದಿಗಳನ್ನು ಪಟ್ಟಿಗೆ ಸೇರಿಸಲಾಗಿದೆ.
ಮನೆ ಯಜಮಾನಿಗೆ ಗೃಹಲಕ್ಷ್ಮಿ ಸವಲತ್ತು ಸಿಗಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿಯನ್ನು ಸಿವಿಲ್ ಠಾಣೆಗಳಿಗೆ, ಹುಬ್ಬಳ್ಳಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿಯನ್ನು ಧಾರವಾಡ ಠಾಣೆಗಳಿಗೆ ವರ್ಗಾಯಿಸಲಾಗಿದೆ. ಹಿರಿತನದ ಆಧಾರದ ಮೇಲೆ ಕೆಲವೇ ಕೆಲವು ಸಿಬ್ಬಂದಿಗೆ ಅಕ್ಕಪಕ್ಕದ ಠಾಣೆಗಳು ಲಭ್ಯವಾಗಿದೆ. ಈ ಕುರಿತು ಡಿಸಿಪಿ ರಾಜೀವ್ ಎಂ ಪ್ರತಿಕ್ರಿಯಿಸಿ, ಸಿಬ್ಬಂದಿ ವರ್ಗಾವಣೆ ಪ್ರಕ್ರಿಯೆ ಮುಗಿಸುವುದರ ಜೊತೆಗೆ ಆದೇಶ ಪ್ರತಿ ಸಹ ನೀಡಲಾಗಿದೆ. ಸಿಬ್ಬಂದಿ ವರ್ಗಾವಣೆಯಾದ ಠಾಣೆಗೆ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.