ಬೆಂಗಳೂರು, (ಏ.27): ವೀಕೆಂಡ್ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇಂದು (ಮಂಗಳವಾರ)  ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, 180 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 1400775 ಕ್ಕೆ ಏರಿಕೆಯಾಗಿದ್ರೆ, ಸಾವನ್ನಪ್ಪಿದವರ ಸಂಖ್ಯೆ 14807ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಬೆಡ್, ಆಕ್ಸಿಜನ್ ಕೊರತೆ: ಮಹತ್ವದ ಕಾರ್ಯಕ್ಕೆ ಮುಂದಾದ ಕಾಂಗ್ರೆಸ್

ಮಂಗಳವಾರ 10793 ಸೋಂಕಿತರು ಸೇರಿದಂತೆ ಇದುವರೆಗೆ 1084050 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 301899.

ಬೆಂಗಳೂರಿನಲ್ಲಿ ಹೆಚ್ಚು
 ಎಂದಿನಂತೆ ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ 17550 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ.