ಬೆಂಗಳೂರು, (ಜ.22): ರಾಜ್ಯದಲ್ಲಿಇಂದು (ಶುಕ್ರವಾರ) ಅತೀ ಕಡಿಮೆ ಅಂದ್ರೆ 324 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಜನರು ಸಾವನ್ನಪ್ಪಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದ್ರೆ, ಸೋಂಕಿನಿಂದ 12,190 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾಮಾರಿ ಕೊರೋನಾ ಬಗ್ಗೆ ಭವಿಷ್ಯ ನುಡಿದ ಶಾಂತಲಿಂಗ ಮಹಾಸ್ವಾಮಿ

ಬೆಂಗಳೂರಿನಲ್ಲಿ ಶುಕ್ರವಾರ 160 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 2 ಬಲಿಯಾಗಿದ್ದಾರೆ. ಸಿಲಿಕಾನ್‌ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,96,300ಕ್ಕೇರಿದೆ.

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 890 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,15,382ಕ್ಕೆ ಏರಿಕೆಯಾಗಿದೆ.  6,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 172 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.