ಒಂದೆಡೆ ಮಹಾಮಾರಿ ಕೊರೋನಾಕ್ಕೆ ಔಷಧಿ ವಿತರಣೆಯಾಗುತ್ತಿದ್ದಾರೆ ಇತ್ತ ಕರ್ನಾಟಕದಲ್ಲಿ ಕೊರೋನಾ ಅಬ್ಬರ ದಿನೇ ದಿನೇ ಕಡಿಮೆಯಾಗುತ್ತಿದೆ.

ಬೆಂಗಳೂರು, (ಫೆ.08): ರಾಜ್ಯದಲ್ಲಿ ಇಂದು (ಭಾನುವಾರ) 328 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,42,846ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,239ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗ್ಳೂರಲ್ಲಿ 4 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಇಂದು 127 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,00,692ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 350 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,24,654ಕ್ಕೆ ಏರಿಕೆಯಾಗಿದೆ. ಇನ್ನು 5,934 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 143 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.