* ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪತ್ತೆ* ಡಿ.12ರ ಕೊರೋನಾ ಅಂಕಿ-ಸಂಖ್ಯೆ ಇಲ್ಲಿದೆ* ಮಾಹಿತಿ ನೀಡಿದ ರಾಜ್ಯ ಆರೋಗ್ಯ ಇಲಾಖೆ

ಬೆಂಗಳೂರು, (ಡಿ.12): ರಾಜ್ಯದಲ್ಲಿ ಇಂದು(ಡಿ.12) ಹೊಸದಾಗಿ 330 ಜನರಿಗೆ ಕೊರೋನಾ (Cornavirus( ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 304 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಇನ್ನು ಒಂದು ಒಮಿಕ್ರಾನ್ (Omicron) ಪತ್ತೆಯಾಗಿದೆ.ಈ ಮೂಲಕ ಒಮಿಕ್ರಾನ್ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 30,00,435 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,261 ಸೋಂಕಿತರು ಮೃತಪಟ್ಟಿದ್ದಾರೆ. 29,54,817 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7328 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.27 ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Covid Vaccination: ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ

ರಾಜಧಾನಿ ಬೆಂಗಳೂರಿನಲ್ಲಿ ಇಂದು(ಭಾನುವಾರ) ಹೊಸದಾಗಿ 205 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 147 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5602 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಭಾನುವಾರ ಯಾವುದೇ ಕೊರೋನಾ ಪ್ರಕರಣ ವರದಿಯಾಗಿಲ್ಲ.

ಜಿಲ್ಲಾವಾರು ಕೊರೋನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 205, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 15, ದಾವಣಗೆರೆ 4, ಧಾರವಾಡ 3, ಗದಗ 0, ಹಾಸನ 5, ಹಾವೇರಿ 1, ಕಲಬುರಗಿ 1, ಕೊಡಗು 40, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 13, ರಾಯಚೂರು 0, ರಾಮನಗರ 0, ಶಿವಮೊಗ್ಗ 11, ತುಮಕೂರು 5, ಉಡುಪಿ 1, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಒಮಿಕ್ರಾನ್ 3ನೇ ಪ್ರಕರಣ ಮತ್ತೆ
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ 3ನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೇ ಅದನ್ನು ದೃಢಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ oಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. 

ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.