ಎಸ್ಸಿ, ಎಸ್ಟಿಅಭಿವೃದ್ಧಿಗೆ ₹34300 ಕೋಟಿ;ಸಿಎಂ ನೇತೃತ್ವದ ಸಭೆ ಸಮ್ಮತಿ

ಪ್ರಸಕ್ತ 2023-24ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ (ಪರಿಶಿಷ್ಟಜಾತಿ ಮತ್ತು ಪಂಗಡ ವರ್ಗದ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ) ಅಡಿ 34,293.69 ಕೋಟಿ ರು.ಗಳ ಕ್ರಿಯಾಯೋಜನೆಯನ್ನು ಪರಿಶಿಷ್ಟಜಾತಿ/ಪರಿಶಿಷ್ಟಪಂಗಡದ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ಅನುಮೋದಿಸಿತು.

34300 crore rupis for SC ST development CM-led meeting approves at bengaluru rav

ಬೆಂಗಳೂರು (ಆ.1) :  ಪ್ರಸಕ್ತ 2023-24ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ (ಪರಿಶಿಷ್ಟಜಾತಿ ಮತ್ತು ಪಂಗಡ ವರ್ಗದ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ) ಅಡಿ 34,293.69 ಕೋಟಿ ರು.ಗಳ ಕ್ರಿಯಾಯೋಜನೆಯನ್ನು ಪರಿಶಿಷ್ಟಜಾತಿ/ಪರಿಶಿಷ್ಟಪಂಗಡದ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ಅನುಮೋದಿಸಿತು.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಕ್ರಿಯಾಯೋಜನೆಗೆ ಒಪ್ಪಿಗೆ ನೀಡಿತು. ಸಭೆಯಲ್ಲಿ ಮುಂದಿನ ಎಂಟು ತಿಂಗಳಿಗೆ ಅನುಮೋದಿಸಲಾದ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ ಅನುದಾನ ಸಂಪೂರ್ಣವಾಗಿ ವೆಚ್ಚ ಮಾಡಬೇಕು. ಸಂಬಂಧಪಟ್ಟಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಅದರ ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಪಕ್ಷಗಳ ಗಲಾಟೆಯ ಮಧ್ಯೆಯೇ 9 ಗಂಟೆಯಲ್ಲಿ 11 ಮಸೂದೆ ಅಂಗೀಕಾರ

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಒಟ್ಟು ಬಜೆಟ್‌ ಗಾತ್ರ 3.28 ಲಕ್ಷ ಕೋಟಿ ರು. ಆಗಿದ್ದು, ಅಭಿವೃದ್ಧಿ ಕಾರ್ಯಕ್ರಮಗಳಿಗೆ 1.42 ಲಕ್ಷ ಕೋಟಿ ರು. ನಿಗದಿಪಡಿಸಲಾಗಿದೆ. ಈ ಪೈಕಿ ಪಿಸಿಎಸ್‌ಪಿ/ಟಿಎಸ್‌ಪಿಗೆ 34,221.49 ಕೋಟಿ ರು. ಮತ್ತು ಹಿಂದಿನ ವರ್ಷ ಬಳಕೆಯಾಗದ ಮೊತ್ತ 72.20 ಕೋಟಿ ರು. ಸೇರಿಸಿ 34,293.69 ಕೋಟಿ ರು. ಅನುದಾನ ನೀಡಲಾಗಿದೆ. ಶೇ.84ರಷ್ಟುರಾಜಸ್ವ ಮತ್ತು ಶೇ.16ರಷ್ಟುಬಂಡವಾಳ ವೆಚ್ಚವಾಗಿದೆ. ಈ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಿ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಯಿತು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 5790.67 ಕೋಟಿ ರು., ಇಂಧನ ಇಲಾಖೆಗೆ 5400.98 ಕೋಟಿ ರು., ಕಂದಾಯ ಇಲಾಖೆಗೆ 4041.78 ಕೋಟಿ ರು., ಪರಿಶಿಷ್ಟಜಾತಿ ಕಲ್ಯಾಣಕ್ಕೆ 3787.29 ಕೋಟಿ ರು., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 2779.97 ಕೋಟಿ ರು., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ 2349.85 ಕೋಟಿ ರು., ವಸತಿ ಇಲಾಖೆಗೆ 1431.5 ಕೋಟಿ ರು., ಪರಿಶಿಷ್ಟಪಂಗಡಗಳ ಕಲ್ಯಾಣ ಇಲಾಖೆಗೆ 1387 ಕೋಟಿ ರು., ಶಿಕ್ಷಣ ಇಲಾಖೆಗೆ 1296.96 ಕೋಟಿ ರು., ಆರೋಗ್ಯ ಇಲಾಖೆಗೆ 1122.25 ಕೋಟಿ ರು. ಹಂಚಿಕೆ ಮಾಡಲಾಗಿದೆ.

ಹಳ್ಳಿಗಾಡಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ.60 ಮತ್ತು ಹೊರಗಿನ ವಿದ್ಯಾರ್ಥಿಗಳಿಗೆ ಶೇ.40ರಷ್ಟುವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಬೇಕು. ಎಸ್‌ಸಿ/ಎಸ್‌ಟಿ ವರ್ಗದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ದಲಿತರ ಮಕ್ಕಳು ಶಾಲೆ ಬಿಡಬಾರದು ಎಂದು ಸೂಚಿಸಲಾಯಿತು. ಅಲ್ಲದೇ, ದಲಿತರಿಗೆ ಎಲ್ಲೆಲ್ಲಿ ರುದ್ರಭೂಮಿ ಬೇಡಿಕೆ ಇದೆಯೋ ಅಲ್ಲಿ ರುದ್ರಭೂಮಿ ಒದಗಿಸಬೇಕು. ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ಜಾಗ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಯಿತು.

ಇದೇ ವೇಳೆ, ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಯೋಜನಾ ಉಸ್ತುವಾರಿ ಕೋಶ ರಚನೆ ಪ್ರಸ್ತಾವನೆ ಮಾಡಲಾಗಿತ್ತು. ಹಾಸ್ಟೆಲ್‌ಗಳ ಅತ್ಯುತ್ತಮ ನಿರ್ವಹಣೆಗೆ ರೇಣುಕಾ ಚಿದಂಬರಂ ಅಧ್ಯಕ್ಷತೆಯ ಸಮಿತಿಯು ಸಲ್ಲಿಸಿರುವ ವರದಿಯನ್ನು ಪರಿಗಣಿಸುವಂತೆ ಪರಿಷತ್‌ನ ಸದಸ್ಯರು ಸಲಹೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಮತ್ತು ರಾಜ್ಯ ಅಭಿವೃದ್ಧಿ ಪರಿಷತ್‌ನ ಉಪಾಧ್ಯಕ್ಷ ಡಾ.ಎಚ್‌.ಸಿ.ಮಹದೇವಪ್ಪ, ಸಚಿವರಾದ ಎಚ್‌.ಕೆ.ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಎಂ.ಸಿ.ಸುಧಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ಅನುದಾನ ಖರ್ಚು ಮಾಡದಿದ್ದರೆ ಕ್ರಮ: ಸಿಎಂ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ವೆಚ್ಚ ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದ್ದು, ಅದರಂತೆ ಯಾರು ನಿರ್ಲಕ್ಷ್ಯ ತೋರುತ್ತಾರೋ ಅಂತಹವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

'ನನ್ನ ಫೋಟೋಗೆ ಹಾರ ಹಾಕುವುದಕ್ಕೆ ಮುಂಚೆಯೇ ಪೆರಿಫೆರಲ್‌ ಆರಂಭಿಸಿ' ಡಿಸಿಎಂ ಎದುರು ರೈತರು ಕಣ್ಣೀರು!

ಪ್ರತಿ ಇಲಾಖೆಯು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳ ಅನುಷ್ಠಾನದ ಬಳಿಕ ಪರಿಣಾಮದ ಮೌಲ್ಯಮಾಪನ ವರದಿಯನ್ನೂ ಸಿದ್ಧಪಡಿಸಿ ಫಲಾನುಭವಿಗಳ ಸ್ಥಿತಿಗತಿಯಲ್ಲಾಗಿರುವ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿದರು. ಎಸ್‌ಸಿ/ಎಸ್‌ಟಿ ವರ್ಗದ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯ ಅನುದಾನ ನೇರವಾಗಿ ಆ ಸಮುದಾಯಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಕಾನೂನು ರೂಪಿಸಿರುವುದರಿಂದ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

Latest Videos
Follow Us:
Download App:
  • android
  • ios