* ಕರ್ನಾಟಕದಲ್ಲಿ ಕೊರೋನಾ ಏರಿಳಿತ* ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ 0.41* ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾಹಿತಿ

ಬೆಂಗಳೂರು, (ಅ.19): ಕರ್ನಾಟಕದಲ್ಲಿ (Karnataka ಇಂದು (ಮಂಗಳವಾರ) 349 ಕೊರೋನಾ ಪಾಸಿಟಿವ್ (Coronavirus) ಕೇಸ್ ಪತ್ತೆಯಾಗಿದ್ದು, 14 ಜನರು ಸಾವನ್ನಪ್ಪಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು 399 ಮಂದಿ ಕೊವಿಡ್​ನಿಂದ (Covid) ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9100 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ (positivity Rate) ಶೇ 0.41 ಇದೆ.

ವಿದೇಶದಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ ಇಲ್ಲ!

ರಾಜ್ಯದಲ್ಲಿ ಈವರೆಗೆ ಒಟ್ಟು 29,84,022 ಸೋಂಕು ದೃಢಪಟ್ಟಿದ್ದು, ಈವರೆಗೆ 37,967 ಜನರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
29,36,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ 161 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 125 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 5 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,49,662 ಇದ್ದರೆ, ಚೇತರಿಸಿಕೊಂಡವರ ಸಂಖ್ಯೆ 12,26,666 ಇದೆ. ನಗರದಲ್ಲಿ ಪ್ರಸ್ತುತ 6,776 ಸಕ್ರಿಯ ಪ್ರಕರಣಗಳಿವೆ. ಕೊವಿಡ್​ನಿಂದ ಈವರೆಗೆ 16,219 ಮಂದಿ ಬಲಿಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್? 
ಬೆಂಗಳೂರು ನಗರ 161, ಮೈಸೂರು 37, ದಕ್ಷಿಣ ಕನ್ನಡ 24, ಹಾಸನ 23, ಉತ್ತರ ಕನ್ನಡ 19, ತುಮಕೂರು 14, ಶಿವಮೊಗ್ಗ 12, ಚಿಕ್ಕಮಗಳೂರು 8, ಕೋಲಾರ, ಬೆಳಗಾವಿ 5, ಮಂಡ್ಯ, ರಾಮನಗರ, ಚಿತ್ರದುರ್ಗ, ಕೊಡಗು 4, ಬೆಂಗಳೂರು ಗ್ರಾಮಾಂತರ, ಧಾರವಾಡ, ಕೊಪ್ಪಳ 2, ದಾವಣಗೆರೆ, ಚಾಮರಾಜನಗರ, ಬೀದರ್, ಬಳ್ಳಾರಿ, ವಿಜಯಪುರ, ಯಾದಗಿರಿ, ರಾಯಚೂರು 1.