ಕನ್ನಡಪರ ಹೋರಾಟಗಾರರು, ರೈತ ಮುಖಂಡರ ಮೇಲೆ ದಾಖಲಾದ ಕೇಸುಗಳೂ ಸೇರಿದಂತೆ 35 ಕ್ರಿಮಿನಲ್‌ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು (ಸೆ.20) : ಕನ್ನಡಪರ ಹೋರಾಟಗಾರರು, ರೈತ ಮುಖಂಡರ ಮೇಲೆ ದಾಖಲಾದ ಕೇಸುಗಳೂ ಸೇರಿದಂತೆ 35 ಕ್ರಿಮಿನಲ್‌ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ಶೇ.25 ರಷ್ಟುಸಂಖ್ಯಾಬಲ ಹೆಚ್ಚಳ

ಸಚಿವ ಸಂಪುಟದ ಉಪಸಮಿತಿಯ ಶಿಫಾರಸು ಆಧರಿಸಿ ತೀರ್ಮಾನಿಸಲಾಗಿದೆ. ಕನ್ನಡಪರ ಹೋರಾಟಗಾರರು, ರೈತ ಮುಖಂಡರು ಸೇರಿದಂತೆ ಇತರ ವಿರುದ್ಧ ದಾಖಲಾದ 35 ಕ್ರಿಮಿನಲ್‌ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಸಹ ಸೇರಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಪುಟದ ಇತರ ನಿರ್ಣಯಗಳು:

  • ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್‌ ಕೇಂದ್ರವನ್ನು 50 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ.
  • ಮುಖ್ಯಮಂತ್ರಿ ವಿದ್ಯಾಸಿರಿ ಯೋಜನೆಯನ್ನು ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಲು ಒಪ್ಪಿಗೆ
  • ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟಜಾತಿ ಮತ್ತು ಪಂಗಡ ಕುಟುಂಬಗಳ ಗೃಹ ವಿದ್ಯುತ್‌ ಬಳಕೆದಾರರಿಗೆ ಮಾಸಿಕ 75 ಯೂನಿಟ್‌ ಉಚಿತ ವಿದ್ಯುತ್‌ ಒದಗಿಸುವ ಆದೇಶಕ್ಕೆ ಅನುಮೋದನೆ.

ಕೊನೆಗೂ ಪೌರಕಾರ್ಮಿಕರ ಹೋರಾಟಕ್ಕೆ ಜಯ; ಸರ್ಕಾರಿ ನೌಕರರಾಗಿ ನೇಮಕ!

ಪ್ರೌಢಶಿಕ್ಷಣ ಮಂಡಳಿ, ಪಪೂ ಮಂಡಳಿ ವಿಲೀನ:

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಮಂಡಳಿಯನ್ನು ವಿಲೀನಗೊಳಿಸುವ ಮಹತ್ವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರೌಢ ಶಿಕ್ಷಣ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿ ವಿಲೀನಗೊಳಿಸುವ ಸಂಬಂಧ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಕುರಿತ ವಿಧೇಯಕವನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ. ಎರಡು ಮಂಡಳಿಗಳನ್ನು ಒಗ್ಗೂಡಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಂಬ ಒಂದೇ ಪರೀಕ್ಷಾ ಮಂಡಳಿಯನ್ನು ರಚಿಸಲಾಗುವುದು. ಎನ್‌ಇಪಿ ಅನ್ವಯ ಮರುನಾಮಕರಣ ಮಾಡಬೇಕಾಗಿದೆ ಎಂದು ಹೇಳಲಾಗಿದೆ. ವಿಲೀನಗೊಳಿಸುವ ಮೂಲಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಹೊಸ ಸ್ವರೂಪ ಪಡೆಯಲಿದೆ.

ಒಂದು ಸಾವಿರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ಶೀಘ್ರ ಹಾಸ್ಟೆಲ್‌: ಕೋಟ ಶ್ರೀನಿವಾಸ ಪೂಜಾರಿ

ಇದೇ ವೇಳೆ ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶಿಕ್ಷಕರ ವರ್ಗಾವಣೆಯಲ್ಲಿನ ಕೆಲ ಗೊಂದಲಗಳ ನಿವಾರಣೆಗೆ ಕುರಿತ ವಿಧೇಯಕ ಇದಾಗಿದೆ.