Asianet Suvarna News Asianet Suvarna News

Bengaluru: ಮೆಟ್ರೋ ಟ್ರ್ಯಾಕ್‌ಗೆ ಜಿಗಿದು 35 ವರ್ಷದ ಯುವಕ ಆತ್ಮಹತ್ಯೆ


ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೊಡ್ಡಕಲ್ಲಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದೆ.
 

35 year old Man commits Self Death by jumping into Namma metro Track san
Author
First Published Aug 3, 2024, 7:09 PM IST | Last Updated Aug 3, 2024, 7:21 PM IST

ಬೆಂಗಳೂರು (ಆ.3): ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಶನಿವಾರ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದೆ. ಸಂಜೆ 5.41ರ ವೇಳೆ ಈ ಘಟನೆ ನಡೆದಿದೆ. ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗ ದಲ್ಲಿ ಬರುವ ದೊಡ್ಡಕಲ್ಲಸಂದ್ರ ಸ್ಟೇಷನ್‌ನಲ್ಲಿ ಘಟನೆ ನಡೆದಿದೆ. 35 ವರ್ಷದ ಆಸುಪಾಸಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಮ್ಮ ಮೆಟ್ರೋ ಕೂಡ ಖಚಿತಪಡಿಸಿದೆ. 'ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 17.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ.  ಹಸಿರು ಮಾರ್ಗದಲ್ಲಿ  ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ..' ಎಂದು ನಮ್ಮ ಮೆಟ್ರೋ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಸ್ಟೇಷನ್ ಗೆ ಬರ್ತಿದ್ದಂತೆ ಟ್ರ್ಯಾಕ್ ಗೆ ಯುವಕ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸದ್ಯ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ರೈಲಿನ ಚಕ್ರದಡಿಯಿಂದ ಹೊರತೆಗೆಯುವ ಕೆಲಸ ನಡೆಯುತ್ತಿದೆ. ಸದ್ಯ ಯಲಚೇನಹಳ್ಳಿಯಿಂದ ನಾಗಸಂದ್ರ ನಡುವೆ ಮಾತ್ರವೇ ಮೆಟ್ರೋ ಸಂಚಾರ ನಡೆಯುತ್ತಿದೆ. 

ಜೂನ್‌ ತಿಂಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದ ನೇರಳೆ ಮಾರ್ಗದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಗಡಿ ರಸ್ತೆಯ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8:56 ರ ಸುಮಾರಿಗೆ ಸಂಭವಿಸಿದ ಈ ಘಟನೆಯು ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗಳ ಕಾಲ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇದು ಮೆಟ್ರೋ ಸ್ಟೇಷನ್‌ನಲ್ಲಿ ಇದು ಐದನೇ ಘಟನೆ ಇದಾಗಿದೆ. ಶುಕ್ರವಾರ 4 ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಬಿದ್ದಿತ್ತು. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಗು ಹೆಚ್ಚೇನು ಅಪಾಯವಾಗದೇ ಬದುಕುಳಿದಿತ್ತು.

ಮಾನಸಿಕ ಖಿನ್ನತೆಯಿಂದ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ; ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತ!

ಜನವರಿ 5 ರಂದು  23 ವರ್ಷದ ಕೇರಳ ವ್ಯಕ್ತಿಯೊಬ್ಬ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ತೀವ್ರವಾಗಿ ಗಾಯಗೊಂಡಿದ್ದರು. ಆತ್ಮಹತ್ಯೆ ಪ್ರಯತ್ನ ವಿಫಲವಾಗಿತ್ತು. ಪ್ರತಿಷ್ಠಿತ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ 19 ವರ್ಷದ ಕಾನೂನು ವಿದ್ಯಾರ್ಥಿ ಮಾರ್ಚ್ 21 ರಂದು ದೀಪಾಂಜಲಿ ನಗರ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಟ್ರ್ಯಾಕ್‌ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡರು. ಒಂದೇ ವರ್ಷದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಗಿದು ಆತ್ಮಹತ್ಯೆ ಮಾಡಿಕೊಂಡ 2ನೇ ಪ್ರಕರಣ ಇದಾಗಿದೆ.

ಬೆಂಗಳೂರು ಮೆಟ್ರೋಗೆ ಹಳಿಗೆ ಹಾರಿ ಮೃತಪಟ್ಟ ಯುವಕ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಧ್ರುವ ಕಕ್ಕರ್!

Latest Videos
Follow Us:
Download App:
  • android
  • ios