Asianet Suvarna News Asianet Suvarna News

Corona Update: ಕರ್ನಾಟಕದಲ್ಲಿ ಕೊರೋನಾ ಏರಿಕೆ, ಇಲ್ಲಿದೆ ಡಿ.28ರ ಅಂಕಿ-ಸಂಖ್ಯೆ

* ಕರ್ನಾಟಕದಲ್ಲಿ ಕೊರೋನಾ ಏರಿಕೆ
* ಇಂದು(ಡಿ.28 ಹೊಸದಾಗಿ 356 ಕೇಸ್ ಪತ್ತೆ
*  ರಾಜ್ಯದಲ್ಲಿ 7456 ಸಕ್ರಿಯ ಪ್ರಕರಗಳು

356 New Coronavirus Cases and two deaths In Karnataka On Dec 28th rbj
Author
Bengaluru, First Published Dec 28, 2021, 9:26 PM IST

ಬೆಂಗಳೂರು, (ಡಿ.28): ರಾಜ್ಯದಲ್ಲಿ ಕೊರೋನಾ (Coronavirus) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಇಂದು (ಮಂಗಳವಾರ)  356 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇಬ್ಬರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಇದರೊಂದಿಗೆ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 38,318ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್‌ ಬುಲೆಟಿನ್ ಹೊರಡಿಸಿದೆ. 

ಇದುವರೆಗೆ ರಾಜ್ಯದಲ್ಲಿ 30,05,23 ಸೋಂಕಿತರ ಪೈಕಿ 2959429 ಜನ ಗುಣಮುಖರಾಗಿದ್ದಾರೆ. ಇದರಿಂದ ರಾಜ್ಯದಲ್ಲಿ 7456 ಸಕ್ರಿಯ ಪ್ರಕರಗಳಿವೆ.

Covid 19 Variant: ಒಮಿಕ್ರೋನ್‌ ಸ್ಫೋಟ: ಸೋಮವಾರ ದಾಖಲೆಯ 156 ಹೊಸ ಕೇಸ್‌!

ಇನ್ನು ಬೆಂಗಳೂರಿನಲ್ಲಿ (Benglauur) ಮಂಗಳವಾರ 269 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,61,997ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ.

 ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ
 ಕರ್ನಾಟಕ ರಾಜ್ಯದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮನೆ ಮನೆಗೆ ತೆರಳಿ ಆರೋಗ್ಯ ಸರ್ವೆ ಮಾಡುವಂತೆ ಆದೇಶ ನೀಡಲಾಗಿದೆ. ಆರೋಗ್ಯ ಸರ್ವೆ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ತೀವ್ರ ಉಸಿರಾಟ ಸಮಸ್ಯೆ ಇರುವ ಕೇಸ್​ಗಳ ಸರ್ವೆಗೆ ಆದೇಶ ನೀಡಿದೆ.

ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಸರ್ಕಾರ ಆದೇಶ ನೀಡಿದ್ದು ನಾಳೆಯಿಂದ ರಾಜ್ಯಾದ್ಯಂತ ILI (influenza-like illness), SARI (Severe acute respiratory infections) ಕೇಸ್​ಗಳ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ನಾಳೆಯಿಂದ 2022ರ ಜನವರಿ 15 ರವರೆಗೆ ಆರೋಗ್ಯ ಸರ್ವೆ ಕಾರ್ಯ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ನಡೆಸಿ ಪೋರ್ಟಲ್​​ನಲ್ಲಿ ವರದಿ ಹಾಕಲು ಸೂಚನೆ ಕೊಡಲಾಗಿದೆ.

ಸುಧಾಕರ್ ಪ್ರತಿಕ್ರಿಯೆ
ಇಂದಿನಿಂದ ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸುಧಾಕರ್, ಕೆಲವರು ವಿತಂಡವಾದ ಮಾಡುತ್ತಿದ್ದಾರೆ. ರಾತ್ರಿಯಲ್ಲಿ ಮಾತ್ರ ಕೋವಿಡ್ ಹರಡುತ್ತಾ ಅಂತ ಪ್ರಶ್ನಿಸುತ್ತಿದ್ದಾರೆ. ಅಂಥವರಿಗೆ ನಾವೇನೂ ಮಾಡೋಕೆ ಆಗಲ್ಲ. ವೈಜ್ಞಾನಿಕ ದೃಷ್ಟಿಕೋನದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೋಟೆಲ್, ಬಾರ್, ಪಬ್ ಇತ್ಯಾದಿಗಳು ಯಾವುದೇ ಚಟುವಟಿಕೆ ನಡೆಸುವಂತಿಲ್ಲ  ಇದಕ್ಕೆ ಜನರು ಸಹ ಸಹಕಾರ ನೀಡಬೇಕು. ಕರ್ನಾಟಕ ಒಂದೇ ಅಲ್ಲದೆ ದೇಶದ ಇತರ ರಾಜ್ಯಗಳಲ್ಲಿಯೂ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಜನವರಿ 10 ನಂತರ ಬೂಸ್ಟರ್ ಡೋಸ್ ಗೆ ಚಾಲನೆ ಕೊಡಲಿದ್ದೇವೆ ಎಂದರು.

Follow Us:
Download App:
  • android
  • ios