ರಾಜ್ಯದಲ್ಲಿ ಇಳಿದ ಕೊರೋನಾ ಕೇಸ್: ಪಾಸಿಟಿವಿಟಿ ದರ ಶೇ 2.18ಕ್ಕೆ ಇಳಿಕೆ
* ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕಡಿಮೆ
* ಇಂದು (ಭಾನುವಾರ) 3,604 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 89 ಮಂದಿ ಬಲಿ
* ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.18ಕ್ಕೆ ಇಳಿಕೆ
ಬೆಂಗಳೂರು, (ಜೂನ್.27): ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ. ಇಂದು (ಭಾನುವಾರ) 3,604 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 89 ಮಂದಿ ಬಲಿಯಾಗಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 34,743ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೋನಾ 3ನೇ ಅಲೆ: ಮಕ್ಕಳಿಗೇ 95,000 ಬೆಡ್ ಬೇಕು..!
ಬೆಂಗಳೂರಿನಲ್ಲಿ ಭಾನುವಾರ 788 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,11,430ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,98,822ಕ್ಕೆ ಏರಿಕೆಯಾಗಿದೆ. ಇನ್ನು 1,01,042 ಸಕ್ರಿಯ ಪ್ರಕರಣಗಳಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.18ಕ್ಕೆ ಇಳಿದಿದೆ.