Coronavirus Update ಒಮ್ರಿಕಾನ್ ಭೀತಿ ಮಧ್ಯೆ ರಾಜ್ಯದಲ್ಲಿ ಕೊರೋನಾ ಏರಿಳಿತ
* ಒಮ್ರಿಕಾನ್ ಭೀತಿ ಮಧ್ಯೆ ರಾಜ್ಯದಲ್ಲಿ ಕೊರೋನಾ ಏರಿಳಿತ
* ಕರ್ನಾಟಕದಲ್ಲಿ 373 ಹೊಸ ಪ್ರಕರಣಗಳು ಪತ್ತೆ
* 29 ಜಿಲ್ಲೆಗಳಲ್ಲಿ ಶೂನ್ಯ ಮರಣ
ಬೆಂಗಳೂರು, (ಡಿ.09): ಒಮಿಕ್ರಾನ್ (Omicron) ಭೀತಿ ಮಧ್ಯೆ ರಾಜ್ಯದಲ್ಲಿ ಕೊರೋನಾ (Coroanvirus) ಏರಿಳಿತ ಮುಂದುವರೆದಿದೆ. ಇಂದು (ಗುರುವಾರ) 373 ಹೊಸ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಮೃತಪಟ್ಟಿದ್ದಾರೆ
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 99,471ಕ್ಕೆ ಏರಿಕೆಯಾಗಿದ್ರೆ, ಒಟ್ಟು ಮೃತರ ಸಂಖ್ಯೆ 38,253ಕ್ಕೆ ಏರಿಕೆಯಾಗಿದೆ. 292 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈ ಮೂಲಕ ಗುಣಮುಖರಾದವರ ಒಟ್ಟು ಸಂಖ್ಯೆ 29,53,857ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಸದ್ಯ 7,332 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Corona Third Wave: ರಾಜ್ಯದಲ್ಲಿ 3ನೇ ಅಲೆ ಭೀತಿ, ತಜ್ಞರ ಶಿಫಾರಸ್ಸುಗಳು ಇಲ್ಲಿವೆ
ಸೋಂಕಿನ ಶೇಕಡಾವಾರು ಪ್ರಮಾಣ ಶೇ. 0.31 ರಷ್ಟಿದ್ದು, ಮರಣ ಪ್ರಮಾಣ ಶೇ. 1.07 ರಷ್ಟಿದೆ. ಬೆಂಗಳೂರಿನಲ್ಲಿ 211 ಹೊಸ ಪ್ರಕರಣ ಪತ್ತೆಯಾಗಿದ್ದು, 133 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ನಾಲ್ವರು ಸಾವನ್ನಪ್ಪಿದ್ದಾರೆ.
ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ವರದಿಯಾಗಿದೆ. ನಾಲ್ಕು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 2,41,239 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,18,227 ಸ್ಯಾಂಪಲ್ (ಆರ್ಟಿಪಿಸಿಆರ್ 99,784 + 18,443 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲಾವಾರು ಕೊರೋನಾ ಕೇಸ್
ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 211, ಬೆಂಗಳೂರು ನಗರ 211, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 10, ದಾವಣಗೆರೆ 2, ಧಾರವಾಡ 11, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 0, ಕೊಡಗು 21, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 30, ತುಮಕೂರು 11, ಉಡುಪಿ 6, ಉತ್ತರ ಕನ್ನಡ 8, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ದಿನ ಕಳೆದಂತೆ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿರುವುದರಿಂದ ಕೊರೋನಾ 3ನೇ ಅಲೆ (Coronavirus Third Wave)ಭೀತಿ ಶುರುವಾಗಿದೆ.
ಒಮಿಕ್ರಾನ್(Omicron) ಹೊಸ ತಳಿಯಿಂದ ರಾಜ್ಯಕ್ಕೆ ಮೂರನೇ ಅಲೆಯ ಆತಂಕ ಮನೆ ಮಾಡಿದ್ದು, ಇದಕ್ಕೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಬೆಂಗಳೂರಿನ (Bengaluru) ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಒಮಿಕ್ರಾನ್(Omicron) ಹಾಗೂ ಕೊವೀಡ್ (Covid) ನಿಯಂತ್ರಣ ಮಾಡುವ ವಿಚಾರದ ಬಗ್ಗೆ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಒಮಿಕ್ರಾನ್ ಇದೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ನಿಯಂತ್ರಣ ದಲ್ಲಿದೆ ಎಂದರು.
ರಾಜ್ಯದಲ್ಲಿ(Karnataka) ಕೆಲ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣದಲ್ಲಿ ಇರುವುದರಿಂದ ಯೋಚಿಸಿ, ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇನ್ನು ಹೊಸ ಮಾರ್ಗ ಸೂಚಿಗಳನ್ನು ಜಾರಿಗೆ ತಂದರೆ ಇಡೀ ರಾಜ್ಯಕ್ಕೆ ತರಬೇಕಾಗುತ್ತದೆ. ಕೇಂದ್ರ ಸರ್ಕಾರದಿಂದ(Govt Of India) ಕೂಡ ಕೆಲ ಮಾರ್ಗಸೂಚಿ ಹೊರಡಿಸಿದ್ದಾರೆ. ಹೀಗಾಗಿ ಇವೆಲ್ಲವನ್ನು ಪರಮಾರ್ಶಿಸಿ, ಈ ಡಿಸೆಂಬರ್ ಹಾಗೂ ಜನವರಿ ವರೆಗೆ ನಿಯಂತ್ರಣ ಮಾಡಲು ಮಾರ್ಗಸೂಚಿ ಹೊರಡಿಸುತ್ತೇವೆ ಎಂದರು.