ಬೆಂಗಳೂರು, (ಫೆ.02): ರಾಜ್ಯದಲ್ಲಿ ಇಂದು (ಮಂಗಳವಾರ) 395 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಮಾಹಿತಿ ನೀಡಿದ್ದು, ಸೋಂಕಿತರ ಸಂಖ್ಯೆ 9,40,170ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,223ಕ್ಕೇರಿದೆ.

ಲಸಿಕೆ ಪಡೆದ 5 ವೈದ್ಯರಿಗೆ ಕೊರೋನಾ ಸೋಂಕು: ವೈದ್ಯಾ​ಧಿ​ಕಾರಿ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಮಂಗಳವಾರ 199 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,286ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ.

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ದು 412 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,22,004ಕ್ಕೆ ಏರಿಕೆಯಾಗಿದೆ. ಇನ್ನು 5924 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 148 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.