ರಾಜ್ಯದ ಪ್ರಮುಖ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 

 ಬೆಂಗಳೂರು (ಮಾ.07): ಕಾರ್ಮಿಕ ಆಯುಕ್ತ ಅಕ್ರಂ ಪಾಷ ಸೇರಿದಂತೆ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಮಾಡಿದೆ. 

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹರಿಕುಮಾರ್‌ ಝಾ ಅವರನ್ನು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 

ಹರಿಕುಮಾರ್‌ ಝಾ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿದ್ದ ಮಹೇಶ್‌ ಬಿ. ಶಿರೂರ್‌ ಅವರನ್ನು ವರ್ಗಾಯಿಸಲಾಗಿದೆ. 

'ಸಿಎಂ ಅನುಮತಿ ಇಲ್ಲದೇ ವರ್ಗಾವಣೆ ಇಲ್ಲ' ..

ಮಹೇಶ್‌ ಬಿ.ಶಿರೂರ್‌ ಅವರಿಂದ ಖಾಲಿಯಾದ ಸ್ಥಾನಕ್ಕೆ ಕಾರ್ಮಿಕ ಆಯುಕ್ತ ಅಕ್ರಂ ಪಾಷ ಅವರನ್ನು ವರ್ಗಾಯಿಸಲಾಗಿದೆ. ಅಕ್ರಂ ಪಾಷ ಅವರಿಗೆ ಹಾಲಿ ಇದ್ದ ಕಾರ್ಮಿಕ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಅದೇ ರೀತಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಜನಸ್ಪಂದನ) ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರಿಗೆ ಖಾಲಿ ಇದ್ದ ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.