ಇಬ್ಬರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರದ ಸ್ಕಿಲ್ ಮಿಷನ್ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ವಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ವರ್ಗಾಯಿಸಲಾಗಿದ್ದು, ವಸಿರೆಡ್ಡಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.
ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾಡಿ ಗೌತಮ್ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ, ಹುದ್ದೆ ನಿರೀಕ್ಷೆಯಲ್ಲಿದ್ದ ಬಿ. ಶರತ್ ಅವರನ್ನು ರಾಯಚೂರು ಜಿಲ್ಲಾಧಿಕಾರಿಯನ್ನಾಗಿ, ಆರ್. ಸ್ನೇಹಲ್ ಅವರನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾಯಿಸಲಾಗಿದೆ.
