Asianet Suvarna News Asianet Suvarna News

ಗ್ರಾಮೀಣ ವಸತಿ ಯೋಜನೆಯಡಿ 4 ಲಕ್ಷ ಮನೆ: ಸಿಎಂ ಬೊಮ್ಮಾಯಿ

*  1.7 ಲಕ್ಷ ಮನೆಗೆ ಜಿಪಿಎಸ್‌ ಅಪ್‌ಲೋಡ್‌, ಆಧಾರ್‌ ಸಂಯೋಜನೆ ಬಾಕಿ
*  15 ದಿನದಲ್ಲಿ ಕೆಲಸ ಮುಗಿಸಿ: ಸಿಎಂ ಸೂಚನೆ
*  ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡಗುಡೆಗೆ ಕ್ರಮ 
 

4 lakh Houses Under Rural Housing Scheme in Karnataka Says CM Basavaraj Bommai grg
Author
Bengaluru, First Published Aug 18, 2021, 7:55 AM IST
  • Facebook
  • Twitter
  • Whatsapp

ಬೆಂಗಳೂರು(ಆ.18): ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಯಡಿ 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿನದೊಳಗೆ ಜಿಪಿಎಸ್‌ ಅಪ್‌ಲೋಡ್‌ ಮತ್ತು ಆಧಾರ ಕಾರ್ಡ್‌ ಜೋಡಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜೋಡಣೆ ಕಾರ್ಯ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು. ಪ್ರಧಾನಮಂತ್ರಿ ಆವಾಸ್‌ ಯೋಜನೆ (ನಗರ) ಎಎಚ್‌ಪಿ-1.8 ಲಕ್ಷ ಮನೆಗಳು ಕಾಮಕಾರಿ ಪ್ರಾರಂಭವಾಗಿಲ್ಲ. ಈ ಯೋಜನೆಗೆ ಎಸ್‌ಸಿಪಿ/ಟಿಎಸ್‌ಪಿ, ಹಿಂದುಳಿದ ವರ್ಗಗಳು ಮತ್ತು ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಯ ಯೋಜನೆಯಡಿ ಪಡೆದುಕೊಂಡು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊನೆಗೂ ಸಿಎಂ ಬೊಮ್ಮಾಯಿಗೆ ಸರ್ಕಾರಿ ಬಂಗಲೆ ಹಂಚಿಕೆ

ಬೆಂಗಳೂರು ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ 42,361 ಮನೆ ನಿರ್ಮಾಣವಾಗುತ್ತಿದ್ದು, ಬಾಕಿ ಮನೆಗಳ ಟೆಂಡರ್‌ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಗೆ ಸಿದ್ಧತೆ ನಡೆಸಿಕೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡಗುಡೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ, ಇಲಾಖೆ ಕಾರ್ಯದರ್ಶಿ ಮೊಹಮ್ಮದ್‌ ಮೊಹ್ಸಿನ್‌ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
 

Follow Us:
Download App:
  • android
  • ios