ಕರ್ನಾಟಕದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಹಾಗಾದ್ರೆ ಫೆಬ್ರವರಿ 10ರಂದು ಎಷ್ಟು ಪಾಸಿಟಿವ್ ಕೇಸ್? ಎಷ್ಟು ಡಿಸ್ಚಾರ್ಜ್? ಎಷ್ಟು ಸಾವು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಫೆ.10):: ರಾಜ್ಯದಲ್ಲಿ ಇಂದು (ಬುಧವಾರ) 415 ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,43,627ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,244ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೋನಾ ಲಸಿಕೆ ಹಾಕಿಸಿಕೊಂಡವರು ಮದ್ಯಪಾನ ಮಾಡಬಹುದಾ?

ಬೆಂಗಳೂರಿನಲ್ಲಿ ಬುಧವಾರ 208 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,01,095ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,25,489ಕ್ಕೆ ಏರಿಕೆಯಾಗಿದೆ. ಇನ್ನು 5,875 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 141 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.