ಬೆಂಗಳೂರು, (ಜ.18): ರಾಜ್ಯದಲ್ಲಿ ಇಂದು (ಸೋಮವಾರ) ಅತೀ ಕಡಿಮೆ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 435 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕಿಲ್ಲರ್ ಕೊರೋನಾ ಸೋಂಕಿಗೆ 9 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಬಲಿಯಾದವರ ಸಂಖ್ಯೆ 12,275 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

'ಕೊರೊನಾ ಲಸಿಕೆ ಪಡೆದುಕೊಂಡ್ರೆ ಸಲಿಂಗಕಾಮಿಗಳಾಗುತ್ತೀರಿ'

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 973 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,12,205 ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ 8.033 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 177 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ 193 ಮಂದಿಗೆ ಸೋಂಕು ತಗುಲಿದ್ದು,  6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 3,95,152 ಕ್ಕೆ ಏರಿಕೆಯಾಗಿದೆ.