ಕೊರೋನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಸಹ ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಬೆಂಗಳೂರು, (ಮೇ.04): ರಾಜ್ಯದಲ್ಲಿ ಅಟ್ಟಹಾಸ ಮುಂದುವರೆದಿದ್ದು, ಇಂದು (ಮಂಗಳವಾರ) 44631 ಪಾಸಿಟಿವ್ ಕೇಸ್‌ ಪತ್ತೆಯಾಗಿವೆ. 292 ಸೋಂಕಿತರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಒಟ್ಟು ಸೋಂಕಿತರ ಸಂಖ್ಯೆ 16,90,934 ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 16538ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಚಿವ ಸುಧಾಕರ್​ಗೆ ಮುಖಭಂಗ: ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ

24,714 ಜನ ಮಂಗಳವಾರ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 12,10,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಬರೋಬ್ಬರಿ 4,64,363 ಸಕ್ರಿಯ ಪ್ರಕರಣಗಳಿವೆ.

ಈ ಮೂಲಕ ಸೋಂಕಿತರ ಸಂಖ್ಯೆ 1690934ಕ್ಕೆ ಏರಿಕೆಯಾಗಿದೆ. ಇವರಲ್ಲಿ ಮಂಗಳವಾರ 24714 ಜನರು ಸೇರಿದಂತೆ ಇದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 464363 ಸಕ್ರಿಯ ಕೇಸ್‌ಗಳಿವೆ.