* ಕರ್ನಾಟಕದಲ್ಲಿ ಕೊಂಚ ಕೊರೋನಾ ಏರಿಕೆ* 462 ಜನರಿಗೆ ಕೊರೋನಾ ಸೋಂಕು ದೃಢ* ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ 

ಬೆಂಗಳೂರು, (ಅ.20): ಕರ್ನಾಟಕದಲ್ಲಿ (Karnataka) ಕೊರೋನಾ ಸೋಂಕು (Coronavirus) ಕೊಂಚ ಏರಿಕೆಯಾಗಿದೆ. ಇಂದು (ಅ.20) 462 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.

Add Asianetnews Kannada as a Preferred SourcegooglePreferred

ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,37,405 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 

ವಿದೇಶದಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ ಇಲ್ಲ!

ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,976 ಜನ ಸಾವನ್ನಪ್ಪಿದ್ದಾರೆ (Death). ರಾಜ್ಯದಲ್ಲಿ 9,074 ಜನರಲ್ಲಿ ಕೊರೋನಾ ಸೋಂಕು ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು (ಬುಧವಾರ) ಒಂದೇ ದಿನ 253 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, 6 ಮಂದಿ ಬಲಿಯಾಗಿದ್ದಾರೆ.

. ಈ ಮೂಲಕ, ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ 12,49,915 ಕ್ಕೆ ಏರಿಕೆಯಾಗಿದೆ. ಈ ಪೈಕಿ 12,26,929 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,225 ಜನರು ಮೃತಪಟ್ಟಿದ್ದು, 6,760 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿನ ಸಂಖ್ಯೆ 
ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 253, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 19, ಹಾವೇರಿ 0, ಕಲಬುರಗಿ 2, ಕೊಡಗು 12, ಕೋಲಾರ 4, ಕೊಪ್ಪಳ 1, ಮಂಡ್ಯ 10, ಮೈಸೂರು 43, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 32, ಉಡುಪಿ 15, ಉತ್ತರ ಕನ್ನಡ 1, ವಿಜಯಪುರ 1, ಯಾದಗಿರಿ 1.