ಕರ್ನಾಟಕದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಲ್ಲಿದೆ ಜ.29ರ ಲೆಕ್ಕಾಚಾರ
ಕರ್ನಾಟಕದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಸೋಂಕು ಹಾಗೂ ಸಾವಿನ ಪ್ರಮಾಣದಲ್ಲೂ ಭಾರೀ ಇಳಿಕೆಯಾಗಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ.
ಬೆಂಗಳೂರು, (ಜ.29): ರಾಜ್ಯದಲ್ಲಿ ಇಂದು (ಶುಕ್ರವಾರ) 468 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಒಟ್ಟ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,38,401ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,211ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಖಾಸಗಿ ಆಸ್ಪತ್ರೇಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಕೋಟಿ ಕೋಟಿ ವೆಚ್ಚ..!
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ರಾಜ್ಯದಲ್ಲಿ ಇಂದು 607 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,20,110ಕ್ಕೆ ಏರಿಕೆಯಾಗಿದೆ.
ಇನ್ನು 6061 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 148 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ 264 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,98,411ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.