ಕರ್ನಾಟಕದಲ್ಲಿ ಕೊರೋನಾ ಅಬ್ಬರ ದಿನೇ ದಿನೇ ಕಡಿಮೆಯಾಗುತ್ತಿದೆ. ಫೆ.07 ಅಂಕಿ-ಸಂಖ್ಯೆ ಇಲ್ಲಿದೆ ನೋಡಿಕೊಳ್ಳಿ
ಬೆಂಗಳೂರು, (ಫೆ.07): ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 487 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸಂಖ್ಯೆ 9,42,518 ಕ್ಕೆ ಏರಿಕೆಯಾಗಿದೆ.
ಇವತ್ತು ರಾಜ್ಯದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,236 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗ್ಳೂರಲ್ಲಿ 4 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ಇನ್ನು ಕಳೆದ 24 ಗಂಟೆಗಳಲ್ಲಿ 493 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇದುವರೆಗೆ 9,24,304 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 5959 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಭಾಉವಾರ ಒಂದೇ ದಿನ 250 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4,00,565 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4404 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 3,92,263 ಜನ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದು 3897 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 7, 2021, 10:01 PM IST