ಬೆಂಗಳೂರು, (ಮೇ.07): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು (ಏ.07) ರಾಜ್ಯದಲ್ಲಿ 48,781 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 18,38,885ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 28,623 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 12,84,420 ಮಂದಿ ಗುಣಮಖರಾದಂತಾಗಿದೆ. 

ಕರ್ನಾಟಕ ಲಾಕ್​ಡೌನ್: ಏನಿರತ್ತೆ? ಏನಿರಲ್ಲ? ಇಲ್ಲಿದೆ ಹೊಸ ಗೈಡ್‌ಲೈನ್ಸ್

 ಇನ್ನು ಶುಕ್ರವಾರ ಒಂದೇ ದಿನ ಸೋಂಕಿಗೆ 592 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 17,804ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 5,36,641 ಸಕ್ರಿಯ ಕೇಸ್‌ಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಏ.07 10745 ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ಹಾಗೂ 1,48,157  ಆರ್​ಟಿಪಿಸಿ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,58,902 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.