ನಾಳೆಯಿಂದ 5 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ

ಮುಂದಿನ 2 ದಿನ ಒಳನಾಡಿನ ಬಾಗಲಕೋಟೆ, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ಧಾರವಾಡ, ಕೊಪ್ಪಳ, ಬಳ್ಳಾರಿ, ಗದಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಸಾಧ್ಯತೆಯೂ ಇದೆ. ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

5 Days Likely Rain in Karnataka From 7th grg

ಬೆಂಗಳೂರು(ಏ.06):  ಬಿಸಿಲ ಝಳದ ನಡುವೆ ಏ.7 ರಿಂದ 11ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲಿನ ತಾಪಕ್ಕೆ ರಾಜ್ಯ ತತ್ತರಿಸಿ ಹೋಗಿದ್ದು, ಇದೀಗ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕೊಡಗು, ಚಿಕ್ಕಮಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ,ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜತೆಗೆ ಮುಂದಿನ 2 ದಿನ ಒಳನಾಡಿನ ಬಾಗಲಕೋಟೆ, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ಧಾರವಾಡ, ಕೊಪ್ಪಳ, ಬಳ್ಳಾರಿ, ಗದಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಸಾಧ್ಯತೆಯೂ ಇದೆ. ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಉತ್ತಮ ಮುಂಗಾರು ಮಳೆಗೆ ಪೂರಕ ಪರಿಸ್ಥಿತಿ ನಿರ್ಮಾಣ: ಹವಾಮಾನ ಇಲಾಖೆ ಮುನ್ಸೂಚನೆ

4 ಡಿಗ್ರಿ ಸೆಲ್ಸಿಯಸ್‌ ವರೆಗೆ ಏರಿಕೆ:

ಮುಂದಿನ 5 ದಿನ ಬೆಳಗಾವಿ, ವಿಜಯಪುರ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವೂ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಚ್ಚನೆಯ ರಾತ್ರಿ:

ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಮುಂದಿನ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

Latest Videos
Follow Us:
Download App:
  • android
  • ios