ರಾಜ್ಯ ಸರ್ಕಾರದಿಂದ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. 

ಬೆಂಗಳೂರು :  ರಾಜ್ಯ ಸರ್ಕಾರ ಸೋಮವಾರ ಐವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಜಂಟಿ ಕಾರ್ಯದರ್ಶಿ ಕೆ.ಲೀಲಾವತಿ ಅವರನ್ನು ಹಾವೇರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಉಜ್ವಲ್‌ ಕುಮಾರ್‌ ಗೋಶಾಲ್‌ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೂ ಸಿಂಧು ಬಿ.ರೂಪೇಶ್‌ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ, ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶದ ವಾಹಕ(ಎಸ್‌ವಿಪಿ) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹೆಫ್ಸಿಬಾ ರಾಣಿ ಕೊರ್ಲಪತಿ ಮತ್ತು ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಸಿ.ಟಿ.ಶಿಲ್ಪಾ ನಾಗ್‌ ಅವರನ್ನು ಮೈಸೂರಿನ ಅಬ್ದುಲ್‌ ನಜೀರ್‌ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಂಸ್ಥೆ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.