Asianet Suvarna News Asianet Suvarna News

Cyclone Mandous: ಬಂಗಾಳಕೊಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮತ್ತೆ 5 ದಿನ ಮಳೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 24ಗಂಟೆವರೆಗೆ 65- 75 ಕಿಮೀ ವೇಗದಲ್ಲಿ ಗಾಳಿ ಇರಲಿದ್ದು, ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 more days of rain in the state Meteorological department forecast rav
Author
First Published Dec 9, 2022, 3:20 PM IST

ಬೆಂಗಳೂರು (ಡಿ.9) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 24ಗಂಟೆವರೆಗೆ 65- 75 ಕಿಮೀ ವೇಗದಲ್ಲಿ ಗಾಳಿ ಇರಲಿದ್ದು, ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮ್ಯಾಂಡಸ್ ಚಂಡಮಾರುತ ಸೃಷ್ಟಿಯಾಗಿದ್ದು, ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲೂ ಅಬ್ಬರದ ಅಲೆಗಳು ಏಳಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

Cyclone : ರಾಜ್ಯಕ್ಕೆ 'ಮ್ಯಾಂಡೌಸ್' ಚಂಡಮಾರುತ ಆಗಮನ: ಮುಂದಿನ 5 ದಿನ ಮಳೆ

ದಕ್ಷಿಣ ಒಳನಾಡು ಕೋಲಾರ, ರಾಮನಗರ ಚಿಕ್ಕಬಳ್ಳಾಪುರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯ ವಾತಾವರಣವಿದ್ದು ಮುಂಜಾನೆ ಮುಸುಕಿನ ವಾತಾವರಣದ ಜತೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು,. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow Us:
Download App:
  • android
  • ios