ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ 1.18 ಲಕ್ಷ ಅರ್ಪಣೆ: ಲಕ್ಷ್ಮೀ ಹೆಬ್ಬಾಳ್ಕರ್
ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರು. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2 ಸಾವಿರ ರು.ನಂತೆ 59 ತಿಂಗಳ ಒಟ್ಟು 1,18,000 ರು.ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ.
ಮೈಸೂರು (ನ.29): ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರು. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2 ಸಾವಿರ ರು.ನಂತೆ 59 ತಿಂಗಳ ಒಟ್ಟು 1,18,000 ರು.ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 1,18,000 ರು. ವೈಯಕ್ತಿಕ ಹಣವನ್ನು ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಮೂಲಕ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದರು. ಹೀಗಾಗಿ ಪ್ರತಿ ತಿಂಗಳ ಯೋಜನೆಯ ಹಣ ನಾಡ ದೇವತೆಗೆ ಸಮರ್ಪಿಸುವ ವ್ಯವಸ್ಥೆಯನ್ನು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಿದ್ದಾರೆ.
ಮಹಡಿ ಕಟ್ಟಿ 1ಕ್ಕಷ್ಟೇ ತೆರಿಗೆ ಕಟ್ಟಿದರೆ ನಡೆಯಲ್ಲ: ಡಿಕೆಶಿ ಖಡಕ್ ಎಚ್ಚರಿಕೆ
ಉಡುಪಿ ಜಿಲ್ಲೆಯಲ್ಲಿ ‘ಗೃಹಲಕ್ಷ್ಮೀ ಅದಾಲತ್’: ಉಡುಪಿ ಜಿಲ್ಲೆಯಲ್ಲಿರುವ ಕೊರಗ ಮತ್ತು ಮಲೆ ಕುಡಿಯ ಕುಟುಂಬಗಳಿಗೂ ಗೃಹಲಕ್ಷ್ಮೀ ಯೋಜನೆ ತಲುಪಿಸುವುದಕ್ಕೆ ‘ಗೃಹಲಕ್ಷ್ಮೀ ಅದಾಲತ್’ ವಿಶೇಷ ಅಭಿಯಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 3.12 ಲಕ್ಷ ಕುಟುಂಬಗಳಿದ್ದು, ಈ ಪೈಕಿ 1,83,072 ಕುಟುಂಬಗಳ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಆದರೆ ಕೊರಗ ಹಾಗೂ ಮಲೆಕುಡಿಯ ಜನಾಂಗದವರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಅವರಿಗೂ ಈ ಯೋಜನೆ ಲಾಭ ತಲುಪಿಸಲು ಪಂಚಾಯಿತಿ ವ್ಯಾಪ್ತಿಯಲ್ಲಿ ಅದಾಲತ್ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ ಎಂದರು. ಬೆಂಗಳೂರಿನಲ್ಲಿ ಸಭೆ: ಉಡುಪಿ ನಗರಕ್ಕೆ ನೀರು ಪೂರೈಸುವ ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಫೆಬ್ರವರಿಯಲ್ಲಿ ಪೂರ್ಣಗೊಳಿಸಲು ಆದೇಶಿಸಿದ್ದೇನೆ. ಕರಾವಳಿಯಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಇದ್ದು, ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಸರಿಪಡಿಸಲಾಗುವುದು ಎಂದು ಸಚಿವೆ ಭರವಸೆ ನೀಡಿದರು.
ಸಚಿವರ ವಿರುದ್ಧ ಮತ್ತೆ ಶಾಸಕ ಲೆಟರ್‌ಬಾಂಬ್: ಸಿಎಂಗೆ ಕೈ ಶಾಸಕ ಬಿ.ಆರ್.ಪಾಟೀಲ್ ಪತ್ರ
ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರಬಂದರು ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮರುನಿರ್ಮಾಣ ಮಾಡಲಾಗುವುದು. ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯಲ್ಲಿ ಹೂಳೆತ್ತಲಾಗುವುದು ಎಂದರು. ಜಿಲ್ಲೆಯಲ್ಲಿ 604 ಕಿಂಡಿ ಅಣೆಕಟ್ಟುಗಳಿದ್ದು, 357 ಕಿಂಡಿ ಅಣೆಕಟ್ಟುಗಳಿಗೆ ತಡೆ ಹಲಗೆ ಅಳವಡಿಸಲಾಗಿದೆ. ಬಾಕಿ ಉಳಿದಿರುವ 343 ಕಿಂಡಿ ಅಣೆಕಟ್ಟುಗಳಿಗೂ ಮುಂದಿನ 15 ದಿನದೊಳಗೆ ತಡೆ ಹಲಗೆ ಅಳವಡಿಸಲು ಸೂಚಿಸಿದ್ದೇನೆ ಎಂದು ಸಚಿವೆ ಹೇಳಿದರು.