ಗುಡ್ ನ್ಯೂಸ್: ರಾಜ್ಯದಲ್ಲಿ ತಗ್ಗಿದ ಕೊರೋನಾ: ಇಲ್ಲಿದೆ ಸೋಮವಾರದ ಅಂಕಿ-ಸಂಖ್ಯೆ
ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಇಂದು (ಸೋಮವಾರ) ಕಡಿಮೆಯಾಗಿದ್ದು, ಇದು ಉತ್ತಮ ಬೆಳವಣಿಗೆಯಾಗಿದೆ.
ಬೆಂಗಳೂರು, (ಅ.19): ಕರ್ನಾಟಕದಲ್ಲಿ ಇಂದು (ಸೋಮವಾರ) ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 5018 ಕೊರೋನಾ ಕೇಸ್ ಪತ್ತೆಯಾಗಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದ್ದು, ಸೋಮವಾರ 64 ಸಾವಿನ ಪ್ರಕರಣಗಳೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 10,542ಕ್ಕೆ ಏರಿಕೆಯಾಗಿದೆ.
ಇನ್ನು ಸೋಮವಾರ ಒಂದೇ ದಿನ 8005 ಕೊರೋನ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಇದುವರೆಗೆ 6,53,829 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾದಂತಾಗಿದೆ.
ಕೊರೋನಾ ಲಸಿಕೆ: ಗುಡ್ ನ್ಯೂಸ್ ಕೊಟ್ಟ ಸೆರಂ ಸಂಸ್ಥೆ!
ಪ್ರಸ್ತುತ ರಾಜ್ಯದಲ್ಲಿ 1,06,214 ಸಕ್ರೀಯ ಕೇಸ್‌ಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರು ನಗರದಲ್ಲಿ 2481 ಜನರು ಸೇರಿದಂತೆ ಒಟ್ಟು 5018 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ.
ಒಟ್ಟಿನಲ್ಲಿ ಪ್ರತಿನಿತ್ಯ 9ರಿಂದ 10 ಸಾವಿರ ಕೇಸ್‌ಗಳು ಪತ್ತೆಯಾಗುತ್ತಿದ್ದವು, ಆದ್ರೆ, ಇದೀಗ ಕೇಸ್ ಪ್ರಮಾಣದ ಸಂಖ್ಯೆ ಇಳಿಮುಖ ಕಾಣುತ್ತಿರುವುದು ಹೊಸ ಆಶಾಭಾವನೆ ಮೂಡಿಸಿದೆ.