ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.
ಬೆಂಗಳೂರು (ಫೆ.15) : ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.
ಸೋಮವಾರ ಹೈಕೋರ್ಟ್(Karnataka Highcourt) ಕಾನೂನು ಸೇವೆಗಳ ಪ್ರಾಧಿಕಾರ(Legal Services Authority)ದ ಕಚೇರಿಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಯೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಟ್ರಾಫಿಕ್ ದಂಡಕ್ಕೆ ಶೇ.50 ವಿನಾಯಿತಿ ವಿಸ್ತರಣೆ ಆಗುತ್ತಾ?
ನಗರದ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಡಾ.ಎಂ.ಎ ಸಲೀಂ(Dr. MA Saleem) ಅವರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಟ್ರಾಫಿಕ್ ದಂಡ(Traffic fine) ಪಾವತಿ ಮೊತ್ತದಲ್ಲಿ ಶೇ.50ರಷ್ಟುರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಮನವಿ ಹಿನ್ನೆಲೆಯಲ್ಲಿ ಶೇ.50ರಷ್ಟುರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರ ತೀರ್ಮಾನಿಸಿತು.
2 ಕೋಟಿ ಪ್ರಕರಣ-1300 ಕೋಟಿ ದಂಡ ಬಾಕಿ
ಸಾರಿಗೆ ಇಲಾಖೆಯು ಫೆ.3ರಿಂದ ಫೆ.11ರವರೆಗೆ ಶೇ.50 ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿತ್ತು. ಇದರಿಂದಾಗಿ ಒಟ್ಟು 52.11 ಲಕ್ಷ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, 152 ಕೋಟಿ ರು. ದಂಡ ಸಂಗ್ರಹಿಸಲಾಗಿತ್ತು.
ರಾಜ್ಯದಲ್ಲಿ ಇನ್ನೂ 2 ಕೋಟಿ ಟ್ರಾಫಿಕ್ ದಂಡ ಪ್ರಕರಣಗಳಿದ್ದು, 1,300 ಕೋಟಿ ರು. ದಂಡದ ಮೊತ್ತ ಸಂಗ್ರಹಗೊಳ್ಳಬೇಕಿದೆ. ಇದರಿಂದ ಶೇ.50ರಷ್ಟುವಿನಾಯ್ತಿ ನೀಡುವುದನ್ನು ಎರಡು ವಾರ ಕಾಲ ವಿಸ್ತರಿಸಲು ಕೋರಿ ವಿಶೇಷ ಆಯುಕ್ತರಾದ (ಸಂಚಾರ ವಿಭಾಗ) ಡಾ.ಸಲೀಂ ಅವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆದು ಕೋರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷೆಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.
57 ಪ್ರಕರಣಗಳಿಗೆ ದಂಡ ಪಾವತಿಸಿದ ಹುಬ್ಳಿ ಹೈದ : ಕೊನೆ ದಿನ 31 ಕೋಟಿ ಸಂಗ್ರಹ
