ಬೆಂಗಳೂರು, (ಏ.05) : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಇಂದು (ಸೋಮವಾರ) ರಾಜ್ಯದಲ್ಲಿ 5279 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿವೆ. ಅಲ್ಲದೇ 32 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3728 ಸೇರಿದಂತೆ ರಾಜ್ಯಾದ್ಯಂತ 5279 ಜನರಿಗೆ ಕೊರೋನಾ ಸೋಂಕು ತಗುಲಿದ್ದು. ಈ ಮೂಲಕ ಸೋಂಕಿತರ ಸಂಖ್ಯೆ 10,20,434 ಕ್ಕ ಏರಿಕೆಯಾಗಿದೆ.

ಕೊರೋನಾ ಆತಂಕ: ಎಲ್ಲಾ ಮುಖ್ಯಮಂತ್ರಿ ಜೊತೆ ಮಹತ್ವದ ಸಭೆ ಕರೆದ ಪ್ರಧಾನಿ ಮೋದಿ!

ಇನ್ನು ಕಳೆದ 24 ಗಂಟೆಗಳಲ್ಲಿ 1856 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಇನ್ನು 42,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸೋಮವಾರ 3728 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,50,759 ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 18 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೆ 4667 ಸೋಂಕಿತರು ಮೃತಪಟ್ಟಿದ್ದಾರೆ.