ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ, ವೇತನ, ಪಿಂಚಣಿ ಶೇ.58.50 ಹೆಚ್ಚಳ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಆ.1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ. 58.50 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
 

58 50 percent increase in salary and pension of employees Says CM Siddaramaiah gvd

ವಿಧಾನಸಭೆ (ಜು.17): ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಆ.1ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ. 58.50 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಸರ್ಕಾರಿ ನೌಕರರ ವೇತನ, ಪಿಂಚಣಿ ಹೆಚ್ಚಳ ಕುರಿತಂತೆ ವಿಧಾನಸಭೆ ಕಲಾಪದಲ್ಲಿ ತಮ್ಮ ಹೇಳಿಕೆ ದಾಖಲಿಸಿದ ಸಿದ್ದರಾಮಯ್ಯ, ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆ ಬೇಡಿಕೆಗೆ ಸಂಬಂಧಿಸಿದಂತೆ 2022ರ ನ. 19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ಕಳೆದ ಮಾ.24ರಂದು ತನ್ನ ಶಿಫಾರಸುಗಳನ್ನು ಸಲ್ಲಿಸಿತ್ತು. ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸೋಮವಾರ ನಡೆದ ಆ.1ರಿಂದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದ್ದು, 2022ರ ಜು.1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ ಎಂದರು. 

ವಾಲ್ಮೀಕಿ ನಿಗಮದ ಹಣ ಎಂಪಿ ಚುನಾವಣೆಗೆ ಬಳಕೆ: ಆರ್‌.ಅಶೋಕ್‌

7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ಮೂಲ ವೇತನಕ್ಕೆ ಶೇ.31ರಷ್ಟು ತುಟ್ಟಿಭತ್ಯೆ ಮತ್ತು ಶೇ.27.50ರಷ್ಟು ಫಿಟ್‌ಮೆಂಟ್‌ ಸೇರಿ ಒಟ್ಟು ಶೇ.58.50ರಷ್ಟು ವೇತನ ಮತ್ತು ಪಿಂಚಣಿ ಪರಿಷ್ಕರಿಸಲಾಗುವುದು. ಈ ಕ್ರಮದಿಂದ 17 ಸಾವಿರ ರು. ಇರುವ ಮೂಲವೇತನ 27 ಸಾವಿರಕ್ಕೆ ಹಾಗೂ ಗರಿಷ್ಠ 1.50 ಲಕ್ಷ ಇರುವ ವೇತನ 2.41 ಲಕ್ಷ ರು.ಗೆ ಹೆಚ್ಚಳವಾಗಲಿದೆ. ಹಾಗೆಯೇ ಕನಿಷ್ಠಪಿಂಚಣಿ 8,500 ರು.ನಿಂದ 13,500 ಹಾಗೂ ಗರಿಷ್ಠ ಪಿಂಚಣಿ 75,300 ರು.ನಿಂದ 1.20 ಲಕ್ಷ ಪರಿಷ್ಕರಣೆಗೊಳ್ಳಲಿದೆ. ಈ ಕ್ರಮದಿಂದಾಗಿ ರಾಜ್ಯ ಸರ್ಕಾರಕ್ಕೆ 20,208 ಕೋಟಿ ರು. ಹೆಚ್ಚುವರಿ ವೆಚ್ಚವಾಗಲಿದೆ ಎಂದರು.

ವಾಲ್ಮೀಕಿ ನಿಗಮ ಹಗರಣಕ್ಕೆ ಪರಿಷತ್‌ ಕಲಾಪ ಬಲಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ಸದ್ದು ಮಂಗಳವಾರವೂ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿತು. ಮುಖ್ಯಮಂತ್ರಿಯವರ ತಲೆದಂಡಕ್ಕೆ ಆಗ್ರಹ ಮತ್ತು ನೆಕ್ಕುಂಟಿ ನಾಗರಾಜ್‌ ಫೋಟೋ ಪೋಸ್ಟರ್‌ ವಿಚಾರ ಕಾಂಗ್ರೆಸ್‌, ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕಲಾಪ ಮುಂದೂಡಿಕೆಯಾಯಿತು. ಬಿಜೆಪಿ ಸದಸ್ಯ ಸಿ.ಟಿ.ರವಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಕುರಿತು ಮಾತನಾಡುವ ಸಂದರ್ಭದಲ್ಲಿ ಪ್ರಕರಣದ ಆರೋಪಿ ನೆಕ್ಕುಂಟಿ ನಾಗರಾಜ್‌ ಕಾಂಗ್ರೆಸ್ ಬೆಂಬಲಿಗನಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಸಚಿವರ ಜೊತೆ ಫೋಟೋ ತೆಗೆಸಿಕೊಂಡಿದ್ದಾನೆ. 

ಹಣಕಾಸು ಇಲಾಖೆಯ ಗಮನಕ್ಕೆ ಬಂದೇ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ. ಹೀಗಾಗಿ ಮುಖ್ಯಮಂತ್ರಿಯವರ ತಲೆದಂಡ ಆಗಬೇಕು ಎಂದು ಸಭಾಪತಿಯವರಿಗೆ ನೆಕ್ಕುಂಟಿ ನಾಗರಾಜ್‌ ಫೋಟೋ ತೋರಿಸಿದರು. ಇದೇ ವೇಳೆ ಕಾಂಗ್ರೆಸ್‌ ಸದಸ್ಯರು, ನೆಕ್ಕುಂಟಿ ನಾಗರಾಜ್‌ ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಇನ್ನಿತರ ಬಿಜೆಪಿ ನಾಯಕರ ಜೊತೆ ತೆಗೆಸಿಕೊಂಡಿರುವ ಫೋಟೋ ಸಹಿತ ದೊಡ್ಡ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಭ್ರಷ್ಟರ ಜೊತೆಗೆ ನಿಂತಿರುವ ಬಿಜೆಪಿಗೆ ಶೇಮ್, ಶೇಮ್ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್, ಲೂಟಿ ರವಿ, ಲೂಟಿ ರವಿ ಎಂದು ಅನೇಕ ಬಾರಿ ಘೋಷಣೆ ಕೂಗಿದರು.

ಇದರಿಂದ ಕೆರಳಿದ ಸಿ.ಟಿ.ರವಿ ಭ್ರಷ್ಟರ ರಕ್ಷಣೆ ಮಾಡುತ್ತಿರುವ ನಿಮಗೆ ಮರ್ಯಾದೆ ಇದೆಯೇ? ಭ್ರಷ್ಟರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜಯೋಗವಿದೆ ಎಂದು ಕಿಡಿಕಾರಿದರು. ಬಳಿಕ ಬಿಜೆಪಿಯ ಉಳಿದ ಸದಸ್ಯರು ಕೂಡ ನೆಕ್ಕುಂಟಿ ನಾಗರಾಜ್‌ ಫೋಟೋಗಳನ್ನು ಪ್ರದರ್ಶಿಸಿದರು. ವಾಗ್ವಾದ ಜೋರಾಗಿ ಗಲಾಟೆ ಮುಂದುವರೆದ ಹಿನ್ನೆಲೆಯಲ್ಲಿ ಸದನವನ್ನು ಗುರುವಾರಕ್ಕೆ ಮುಂದೂಡಿದರು. ಇದಕ್ಕು ಮುನ್ನ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು ಹಗಲು ದರೋಡೆ. ಇದು ಬ್ರಹ್ಮಾಂಡ ಭ್ರಷ್ಟಾಚಾರ. ಲೂಟಿ ಮಾಡಿರುವವರಿಂದ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂಬುದನ್ನು ಒಪ್ಪಿಕೊಳ್ಳಬೇಕು. ಹಣಕಾಸು ಇಲಾಖೆ ನಿರ್ವಹಣೆ ಮಾಡುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ಈ ಹಗರಣ ನಡೆದಿದೆ. ಹಣಕಾಸು ಇಲಾಖೆ ಗಮನಕ್ಕೆ ಇದು ಬಂದೇ ಇಲ್ಲವೇ? ಎಂದು ಪ್ರಶ್ನಿಸಿದರು. ಪರಿಶಿಷ್ಟ ವರ್ಗದ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಬೇಕಿದ್ದ 94 ಕೋಟಿ ಹಣ ಬೇನಾಮಿ ಖಾತೆಗಳಿಗೆ ವರ್ಗಾವಣೆಯಾಗಿದೆ. ಇದೊಂದು ಪೂರ್ವಯೋಜಿತ ದರೋಡೆ. ಒಂದು ವೇಳೆ ನಿಗಮದ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆಗೆ ಮಾಡಿಕೊಳ್ಳದಿದ್ದರೆ ಹಗರಣ ಬೆಳಕಿಗೆ ಬರುತ್ತಿರಲಿಲ್ಲ. ಅವರ ಸಾವಿಗೂ‌ ಮುನ್ನ ಬರೆದಿದ್ದ ಡೆತ್ ನೋಟ್ ವಿವರಗಳನ್ನ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಸೌದೀಲಿ ಕಷ್ಟಕ್ಕೆ ಸಿಲುಕಿದವನ ರಕ್ಷಣೆ: ನೌಕರಿ ನಂಬಿ ಹೋಗಿದ್ದ ರಾಮನಗರದ ಯುವಕ

ಪೊಲೀಸರು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಮನೆಗೆ ಹೋಗಿ ಅವರ ಪತ್ನಿಗೆ ಹಗರಣ ಆರೋಪಿಗಳ ಪರವಾಗಿ ಜಾಮೀನು ನೀಡಲು ತಮ್ಮ ತಕರಾರು ಇಲ್ಲ ಎಂದು ಸಹಿ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಆರೋಪಿಗಳ ಪರವಾಗಿ ಕೆಲಸ ಮಾಡುತ್ತಿರುವ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Latest Videos
Follow Us:
Download App:
  • android
  • ios