ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರ : ಬೊಲೆರೋ ವಾಹನಕ್ಕೆ ಲಾರಿ ಡಿಕ್ಕಿ‌ ಹೊಡೆದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಕೊಲ್ಲೆಯ ಹೊನಗನಹಳ್ಳಿ ಬಳಿ ರಾತ್ರಿ 10.30ಕ್ಕೆ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರೆಲ್ಲರನ್ನೂ ಮಹಾರಾಷ್ಟ್ರ ‌ಮೂಲದ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ. ಆದರೆ ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.

ಅವರೆಲ್ಲ ಕೂಲಿ ಕೆಲಸವನ್ನು ಅರಸಿ ಬೊಲೆರೋ ವಾಹನದಲ್ಲಿ ಕೊಲ್ಹಾಪುರದತ್ತ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾಗಿ ಎಸ್ಪಿ‌ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.