ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಅಬ್ಬರ, ಇರಲಿ ಎಚ್ಚರ
ಕೊರೋನಾ ವ್ಯಾಕ್ಸಿನ್ ಬಂದಿದ್ರು ಕರ್ನಾಟಕದಲ್ಲಿ ಸೋಂಕಿನ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ. ಹಾಗಾದ್ರೆ ರಾಜ್ಯದಲ್ಲಿ ಇದುವರೆಗಿನ ಅಂಕಿ-ಸಂಖ್ಯೆ ಎಷ್ಟು ಎನ್ನುವುದನ್ನು ತಿಳಿದುಕೊಳ್ಳಿ
ಬೆಂಗಳೂರು, (ಮಾ.07): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು (ಬಾನುವಾರ) 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ಕೇಸ್ ಹೆಚ್ಚಳ: ಪರಿಸ್ಥಿತಿ ಹೀಗೆ ಮುಂದುವರೆದ್ರೆ ಕಾದಿದೆ ಗಂಡಾಂತರ..!
ಬೆಂಗಳೂರಿನಲ್ಲಿ ಭಾನುವಾರ 389 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,08,025ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ 351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,772ಕ್ಕೆ ಏರಿಕೆಯಾಗಿದೆ. ಇನ್ನು 6,862 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.