ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಇಳಿಕೆ, ಗುಣಮುಖರಾದವರ ಸಂಖ್ಯೆ ಏರಿಕೆ

ಕರ್ನಾಟಕದಲ್ಲಿ ಕೊಂಚ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

6297 New Covid19 Cases and 8500 recovery In Karnataka On Oct 20 rbj

ಬೆಂಗಳೂರು, (ಅ. 20): ರಾಜ್ಯದಲ್ಲಿ ಇಂದು (ಮಂಗಳವಾರ)  6297 ಕೊರೋನಾ  ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 66 ಮಂದಿ ಮೃತಪಟ್ಟಿದ್ದಾರೆ. 

ಇನ್ನು ಕಳೆದ 8500 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಇದುವರೆಗೆ 6,62,329 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,03,945 ಮಂದಿ ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಫೆಬ್ರವರಿಗೆ ಲಸಿಕೆ ನಿರೀಕ್ಷೆ: ಹಂಚಿಕೆಗೆ ರಾಜ್ಯ ಸಿದ್ಧತೆ! 

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 10,608ಕ್ಕೇರಿದೆ. ಇನ್ನು ಇದುವರೆಗೆ ರಾಜ್ಯದಲ್ಲಿ 6,62,329 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.  ಇದರೊಂದಿಗೆ ಪ್ರಸ್ತುತ ರಾಜ್ಯದಲ್ಲಿ 1,03,945 ಸಕ್ರಿಯ ಕೊರೋನಾ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಬೆಂಗಳೂರಿನ ಅಂಕಿ-ಸಂಖ್ಯೆ
ಬೆಂಗಳೂರಿನಲ್ಲಿ ಮಂಗಳವಾರ 2821 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,12,842 ಕ್ಕೆ ಏರಿಕೆಯಾಗಿದೆ. ಇನ್ನು 36 ಜನ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 3578 ಜನ ಸಾವನ್ನಪ್ಪಿದ್ದಾರೆ. 2,44,740 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದು, 64,523 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Latest Videos
Follow Us:
Download App:
  • android
  • ios