Asianet Suvarna News Asianet Suvarna News

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟು ಹಂಚಿಕೆ: ಸಿದ್ದರಾಮಯ್ಯ

ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲೂಕಿನ ನಂದಗಡದ ಸಮಗ್ರ‌ ಅಭಿವೃದ್ಧಿಗೆ‌ ಸರ್ಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
 

65 percent seat allocation for Kannada students in Sangolli Rayanna Military School Says CM Siddaramaiah gvd
Author
First Published Jan 18, 2024, 1:59 PM IST | Last Updated Jan 18, 2024, 1:59 PM IST

ಬೆಳಗಾವಿ (ಜ.18): ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲೂಕಿನ ನಂದಗಡದ ಸಮಗ್ರ‌ ಅಭಿವೃದ್ಧಿಗೆ‌ ಸರ್ಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಯಣ್ಣನ ಹುಟ್ಟೂರು ಸಂಗೊಳ್ಳಿ ಹಾಗೂ ಅವರನ್ನು ನೇಣುಗಂಬಕ್ಕೆ ಏರಿಸಿದ ನಂದಗಡ ಅಭಿವೃದ್ಧಿಗೆ 2016-17ನೇ ಸಾಲಿನಲ್ಲಿ ಪ್ರಾಧಿಕಾರ ರಚಿಸಲಾಗಿದೆ. ರಾಯಣ್ಣನ ಹೆಸರು ಚಿರಸ್ಥಾಯಿಯಾಗಿಸಲು ಸಂಗೊಳ್ಳಿ ಮತ್ತು ನಂದಗಡ ಅಭಿವೃದ್ಧಿಗೆ ರಚಿಸಲಾದ ಪ್ರಾಧಿಕಾರಕ್ಕೆ ನೂರು ಎಕರೆ ಜಮೀನು ನೀಡಲಾಯಿತು ಎಂದರು.

ಅಪ್ಪಟ ದೇಶಭಕ್ತ ರಾಯಣ್ಣ, ಯುವಕರಿಗೆ ಸ್ಫೂರ್ತಿಯಾಗಬೇಕು ಎಂಬ ಕಾರಣಕ್ಕೆ ₹267 ಕೋಟಿ ವೆಚ್ಚದಲ್ಲಿ ಸೈನಿಕ ಶಾಲೆ, ಶಿಲ್ಪವನ ನಿರ್ಮಿಸಲಾಗಿದೆ. ದೇಶಪ್ರೇಮ ಬೆಳೆಸಲು ಶಾಲೆ ಪ್ರೇರಣೆಯಾಗಿದೆ. ಸಂಗೊಳ್ಳಿ ರಾಯಣ್ಣನಲ್ಲಿದ್ದ ತಾಯ್ನಾಡಿನ ಪ್ರೇಮವನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರ ರಾಜ್ಯಗಳಿಗೆ ಶೇ.35 ರಷ್ಟು ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಅಯೋಧ್ಯೆ ರಾಮಮಂದಿರಕ್ಕೆ ಹೋಗಬೇಕೆಂಬ ಆಸೆ ಇದೆ: ಎಚ್‌.ಡಿ.ದೇವೇಗೌಡ

ಸುಮಾರು 110 ಎಕರೆ ಜಮೀನನ್ನು ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಈಗ ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ, ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿ ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದರು.

Latest Videos
Follow Us:
Download App:
  • android
  • ios