ಬೆಂಗಳೂರು, (ಜ.21): ರಾಜ್ಯದಲ್ಲಿ ಇಂದು (ಗುರುವಾರ) ಹೊಸದಾಗಿ 674 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,34,252 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 815 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,14,492 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 

ಮುಂದಿನ ಹಂತದಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಲಸಿಕೆ?

ಗುರುವಾರ ಕೊರೋನಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ 12,187 ಜನ ಸಾವನ್ನಪ್ಪಿದ್ದಾರೆ. ಇನ್ನು 7554 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 171 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 371 ಜನರಿಗೆ ಸೋಂಕು ತಗುಲಿದೆ. ಇವತ್ತು 509 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,86,769 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4997 ಸಕ್ರಿಯ ಪ್ರಕರಣಗಳಿವೆ ಎಂದು  ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.