ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೋನಾ ಅಟ್ಟಹಾಸ
ಕೊರೋನಾ ಲಸಿಕೆ ಬಂದಾಗಿನಿಂದ ಕಡಿಮೆಯಾಗಿದ್ದ ಮಹಾಮಾರಿ ಕೊರೋನಾ ಮತ್ತೆ ಮೆಲ್ಲಗೆ ತನ್ನ ಆರ್ಭಟ ಶುರು ಮಾಡಿಕೊಂಡಿದೆ. ಅದರಲ್ಲೂ ಕರ್ನಾಟಕದಲ್ಲಿ ಅಬ್ಬರ ಶುರುವಾಗಿದೆ.
ಬೆಂಗಳೂರು, (ಮಾ.05): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು (ಶುಕ್ರವಾರ) 677 ಕೊರೋನಾ ಕೇಸ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,354ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ನಿಯಂತ್ರಣ: ಕರ್ನಾಟಕದ ಕ್ರಮಕ್ಕೆ ಕೇಂದ್ರ ಶ್ಲಾಘನೆ
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 427 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,066ಕ್ಕೆ ಏರಿಕೆಯಾಗಿದೆ. ಇನ್ನು 6,374 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 112 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ 444 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,07,279ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.