Asianet Suvarna News Asianet Suvarna News

ನಂದಿನಿ ಸಿಹಿ ಮಾರಾಟ : ಭಾರೀ ಬಂಪರ್

ನಂದಿನಿ ಉತ್ಪನ್ನಗಳ ಮಾರಾಟ ಭಾರೀ ಏರಿಕೆಯಾಗಿದೆ. ಗೌರಿ ಗಣೇಶ ಹಬ್ಬದಲ್ಲಿ ಹಲವು ರೀತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಏರಿಕೆಯಾಗಿದೆ. 

68 Percent Nandini Sweets Sale Hiked
Author
Bengaluru, First Published Sep 6, 2020, 7:56 AM IST

 ಬೆಂಗಳೂರು (ಸೆ.06):  ಗೌರಿ ಗಣೇಶ ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ರಾಜ್ಯಾದ್ಯಂತ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದು ತಿಂಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ ಶೇ.68ರಷ್ಟುಹೆಚ್ಚಳವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಮಾಹಿತಿ ನೀಡಿದೆ.

ಕೋವಿಡ್‌-19 ಹಿನ್ನೆಲೆಯಲ್ಲಿ ನಂದಿನಿ ಹಾಲು ಸೇರಿದಂತೆ ಚೀಸ್‌, ಪನ್ನೀರ್‌ ಮತ್ತು ಸಿಹಿ ಉತ್ಪನ್ನಗಳ ಮಾರಾಟದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು. ಆದರೆ, ಗೌರಿ ಗಣೇಶ ಮತ್ತು ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಸಿಹಿ ಉತ್ಸವದಲ್ಲಿ ಸಿಹಿ ಉತ್ಪನ್ನಗಳ ಮೇಲೆ ಶೇ.10ರಷ್ಟುರಿಯಾಯಿತಿಯನ್ನು ನೀಡಿತ್ತು.

ಅಯೋಧ್ಯೆ ಅಖಂಡ ಜ್ಯೋತಿಗೆ ನಮ್ಮ ರಾಜ್ಯದ ನಂದಿನಿ ತುಪ್ಪ ...

ಹಾಗಾಗಿ ಆಗಸ್ಟ್‌ 15ರಿಂದ 30ರವರೆಗೆ ನಡೆದ ಸಿಹಿ ಉತ್ಸವದ ಹಿನ್ನೆಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಒಟ್ಟಾರೆ 143 ಟನ್‌ ನಂದಿನಿ ಸಿಹಿ ಉತ್ಪನ್ನಗಳ ಮಾರಾಟವಾಗಿದೆ. ಸಿಹಿ ಉತ್ಪನ್ನಗಳ ಮಾರಾಟದಲ್ಲಿ ಶೇ.68ರಷ್ಟುಹೆಚ್ಚಳವಾಗಿದೆ ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಈ ಬಾರಿ ಸಿಹಿ ಉತ್ಸವ ಯಶಸ್ವಿಯಾದ ಹಿನ್ನೆಲೆಯಲ್ಲಿ ಡಿಸೆಂಬರ್‌ ಅಥವಾ ಜನವರಿಯಲ್ಲಿ ಮತ್ತೊಮ್ಮೆ ಸಿಹಿ ಉತ್ಸವ ಆಯೋಜಿಸಲು ಕೆಎಂಎಫ್‌ ಚಿಂತನೆ ನಡೆಸಿದೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Follow Us:
Download App:
  • android
  • ios