ಬೆಂಗಳೂರು, (ಅ.18): ರಾಜ್ಯದಲ್ಲಿ ಇಂದು (ಭಾನುವಾರ) 7012 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,65,586 ಕ್ಕೆ ಏರಿಕೆಯಾಗಿದೆ.

ಇವತ್ತು 8344 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 6,45,825 ಜನ ಡಿಸ್ಚಾರ್ಜ್ ಆಗಿದ್ದಾರೆ. 1,09,264 ಇವರು ಸಕ್ರಿಯ ಪ್ರಕರಣಗಳಿವೆ. 

ಕರ್ನಾಟಕದ ಶಾಸಕರೊಬ್ಬರ ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 51 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ ಮೃತಪಟ್ಟವರ ಸಂಖ್ಯೆ 10,478 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 3553 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 3,07,540 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 3845 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 2,39,579 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 64,435 ಸಕ್ರಿಯ ಪ್ರಕರಣಗಳಿವೆ.