ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಘೋಷಿಸಿದ್ದಾರೆ. ಈ ಬಾರಿ 70ನೇ ರಾಜ್ಯೋತ್ಸವದ ಅಂಗವಾಗಿ, 70 ಅರ್ಹ ಸಾಧಕರನ್ನು ಸಲಹಾ ಸಮಿತಿಯ ಮೂಲಕವೇ ಆಯ್ಕೆ ಮಾಡಲಾಗುವುದು.
ಬೆಂಗಳೂರು (ಅ.9): ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆ ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.
ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: 'ಅವರು 'ಟೂ ಮಚ್' ಅಂದಿದ್ದು ನನಗೆ ಗೊತ್ತಿಲ್ಲ' ; ಸಮೀಕ್ಷೆ ಬಗ್ಗೆ ಡಿಕೆಶಿ ಆಕ್ಷೇಪ ಆರೋಪಕ್ಕೆ ತಂಗಡಗಿ ಸ್ಪಷ್ಟನೆ
70ನೇ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಶಸ್ತಿಯು 5 ಲಕ್ಷ ನಗದು ಬಹುಮಾನ, 25 ಗ್ರಾಂ. ಚಿನ್ನದ ಪದಕ, ಪ್ರಶಸ್ತಿ ಪತ್ರ, ಶಾಲು, ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ.
