ರಾಜ್ಯದಲ್ಲಿ ಭಾನುವಾರ 720 ಮಂದಿಯಲ್ಲಿ ಕೊರೋನಾ ಸೋಂಕು ದಾಖಲಾಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಆದರೆ ತಾಂತ್ರಿಕ ಕಾರಣದಿಂದ ಭಾನುವಾರ ಪತ್ತೆಯಾಗಿರುವ ಎಲ್ಲ ಪಾಸಿಟಿವ್‌ ಪ್ರಕರಣಗಳ ಮಾಹಿತಿ ನೀಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು (ಆ.22): ರಾಜ್ಯದಲ್ಲಿ ಭಾನುವಾರ 720 ಮಂದಿಯಲ್ಲಿ ಕೊರೋನಾ ಸೋಂಕು ದಾಖಲಾಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಆದರೆ ತಾಂತ್ರಿಕ ಕಾರಣದಿಂದ ಭಾನುವಾರ ಪತ್ತೆಯಾಗಿರುವ ಎಲ್ಲ ಪಾಸಿಟಿವ್‌ ಪ್ರಕರಣಗಳ ಮಾಹಿತಿ ನೀಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಳ್ಳಾರಿ ಹಾಗೂ ಶಿವಮೊಗ್ಗದಲ್ಲಿ ತಲಾ ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 40,168ಕ್ಕೆ ತಲುಪಿದೆ.

ಬೆಂಗಳೂರು ನಗರದಲ್ಲಿ 273, ಹಾಸನ 63, ಮೈಸೂರು 43, ಬಳ್ಳಾರಿ 31, ಚಿಕ್ಕಮಗಳೂರು 30, ಕೊಡಗು 29, ಧಾರವಾಡ 25 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 20 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40.40 ಲಕ್ಷ ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ. 39.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 10,508 ಸಕ್ರಿಯ ಪ್ರಕರಣಗಳಿವೆ.

Corona Crisis: ಕರ್ನಾಟಕದಲ್ಲಿ 1573 ಜನಕ್ಕೆ ಕೊರೋನಾ: 3 ಮಂದಿ ಸಾವು

ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೆ.6.06 ದಾಖಲು: ನಗರದಲ್ಲಿ ಸದ್ಯ 7251 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 70 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 1099 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 30 ಮಂದಿ ಮೊದಲ ಡೋಸ್‌, 36 ಮಂದಿ ಎರಡನೇ ಡೋಸ್‌ ಮತ್ತು 1033 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ.

ನಗರದಲ್ಲಿ 14,713 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 11,828 ಆರ್‌ಟಿಪಿಸಿಆರ್‌ ಹಾಗೂ 2885 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಭಾನುವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 10 ಸಕ್ರಿಯ ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ದ.ಕ.ಜಿಲ್ಲೆಯಲ್ಲಿ ಕೊರೋನಾ 12 ಕೇಸ್‌: ಜಿಲ್ಲೆಯಲ್ಲಿ ಭಾನುವಾರ ಕೊರೋನಾ 12 ಕೇಸ್‌ ಪತ್ತೆಯಾಗಿದೆ. 4 ಮಂದಿ ಗುಣಮುಖರಾಗಿದ್ದು, 80 ಸಕ್ರಿಯ ಪ್ರಕರಣ ಇದೆ. ಜಿಲ್ಲೆಯ ಕೋವಿಡ್‌ ಪಾಸಿಟಿವಿಟಿ ರೇಟ್‌ ಶೇ. 1.43 ಆಗಿದೆ. ಇದುವರೆಗೆ ಒಟ್ಟು ಪಾಸಿಟಿವ್‌ ಕೇಸ್‌ಗಳ ಸಂಖ್ಯೆ 1,36,528ಕ್ಕೆ ಏರಿಕೆಯಾಗಿದ್ದು, 1,34,589 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,859 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಉಚಿತ 3ನೇ ಡೋಸ್‌ ನೀಡಿದರೂ ಜನ ಪಡೆಯುತ್ತಿಲ್ಲ: ಸಚಿವ ಸುಧಾಕರ್‌

ಲಸಿಕೆ ಅಭಿಯಾನ: ಭಾನುವಾರ 4,513 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 57 ಮಂದಿ ಮೊದಲ ಡೋಸ್‌, 328 ಮಂದಿ ಎರಡನೇ ಡೋಸ್‌ ಮತ್ತು 4,128 ಮಂದಿ ಮುನ್ನೆಚ್ಚರಿಕೆ ಡೋಸ್‌ ಪಡೆದಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 11.80 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.