ಬೆಂಗಳೂರು, (ಡಿ.21): ರಾಜ್ಯದಲ್ಲಿ ಮಿತಿಮೀರಿದ್ದ ಕೊರೋನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಸಾವಿರದೊಳಗೆ ಹೊಸ ಪ್ರಕರಣ ಪತ್ತೆ ಆಗುತ್ತಿದೆ.

ರಾಜ್ಯದಲ್ಲಿ ಇಂದು (ಸೋಮವಾರ) 722 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,10,241 ಕ್ಕೆ ಏರಿಕೆಯಾಗಿದೆ.

ವೇಗವಾಗಿ ಹರಡುವ ಹೊಸ ವೈರಸ್ ಪತ್ತೆ: ಎಚ್ಚರಿಕೆ ವಹಿಸಲು ಸಚಿವರು ಮನವಿ

 ಕಳೆದ 24 ಗಂಟೆಗಳಲ್ಲಿ 7 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 12016 ಕ್ಕೆ ಏರಿಕೆಯಾಗಿದೆ. ಇನ್ನು ಸೋಮವಾರ 1261 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 884205 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸದ್ಯ 14,001 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ  363 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 369701 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ  5 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4273ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.