ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುಖ್ಯ: ಡಿಕೆಶಿ
ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುಖ್ಯ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು (ಜು.7): ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ. ಅದು ಅವರ ವೈಯಕ್ತಿಕ ಮತ್ತು ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು. ಪಕ್ಷಕ್ಕೆ ಏನೆಲ್ಲಾ ಕಾರ್ಯಕ್ರಮಗಳು ಅನುಕೂಲವಾಗುತ್ತದೆವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜತೆಗೆ, ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಆದ್ಯತೆ ಎಂದೂ ಸ್ಪಷ್ಟಪಡಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್ ನಾಯಕರು ಮತ್ತು 75 ಸಾವಿರದಿಂದ ಒಂದು ಲಕ್ಷ ಕಾರ್ಯಕರ್ತರು ಬೆಂಗಳೂರಲ್ಲಿ ಮೆರವಣಿಗೆ ಮಾಡಲಿದ್ದಾರೆ. ಇದರ ಜತೆಗೆ 75 ಕಿ.ಮೀ.ಪಾದಯಾತ್ರೆ ಮಾಡಲು ಹೇಳಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆಯಲಾಗಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ 75ನೇ ವರ್ಷಕ್ಕೆ ಪಾದಾರ್ಪಣೆ: ಆ.3ರಂದು ಅದ್ಧೂರಿ ಸಿದ್ದರಾಮೋತ್ಸವ!
ಕಾಂಗ್ರೆಸ್ ದೇಶಕ್ಕೆ ಸ್ವಾತಮತ್ರ್ಯ ತಂದು ಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದರು.
ಹೈಕೋರ್ಚ್ ನ್ಯಾಯಮೂರ್ತಿ ಅವರಿಗೆ ಬೆದರಿಕೆ ಹಾಕಿದ ಬಗ್ಗೆ ರಾಹುಲ್‌ಗಾಂಧಿ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಗಾಂಧಿ ಅವರು ಸರಿಯಾಗಿ ಹೇಳಿದ್ದಾರೆ. ಈ ದೇಶದಲ್ಲಿ ನ್ಯಾಯಾಂಗದ ರಕ್ಷಣೆಯಾಗಬೇಕು. ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹದ ವಿಚಾರವಾಗಿ ಧ್ವನಿ ಎತ್ತಿ, ಮುಕ್ತವಾದ ತನಿಖೆಯಾಗಬೇಕು ಎಂದಿದ್ದಾರೆ. ಹಗರಣದಲ್ಲಿ ಸರ್ಕಾರ ಸಂಪೂರ್ಣವಾಗಿ ಭಾಗಿಯಾಗಿದೆ ಎಂದು ಅವರಿಗೂ ಗೊತ್ತಿದೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು. ನ್ಯಾಯವನ್ನು ಎತ್ತಿ ಹಿಡಿಯಬೇಕಿದೆ ಎಂದು ಹೇಳಿದರು.
ಡಿಕೆಶಿ ಬಂಡೆಗೆ ಡೈನಾಮೈಟ್ ಇಡಲು ಸಿದ್ದು ಸಜ್ಜು: ಬಿಜೆಪಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಆ.3 ರಂದು ದಾವಣಗೆರೆಯಲ್ಲಿ ಆಯೋಜಿಸಲಿರುವ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ರಾಷ್ಟ್ರೀಯ ಮುಖಂಡರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ 5 ರಿಂದ 6 ಲಕ್ಷ ಜನ ಸೇರುವ ನಿರೀಕ್ಷೆ ಇದೆ.