ಬೆಂಗಳೂರು, (ಆ.14): ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ದಾಖಲೆಯ 7,908 ಪ್ರಕರಣ ಪತ್ತೆಯಾಗಿದ್ದು, 104 ಮಂದಿ ಬಲಿಯಾಗಿದ್ದಾರೆ.

ಈ ಮೂಲಕ ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,11,108ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 3,717ಕ್ಕೇರಿದೆ.

ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಇನ್ನು ಚೇತರಿಕೆ ಪ್ರಮಾಣವೂ (59.92%) ಸಹ ಉತ್ತಮವಾಗಿದ್ದು, ಶುಕ್ರವಾರ 5257 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಪ್ರಸ್ತುತ ಒಟ್ಟು 80, 883 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಅಂಕಿ-ಸಂಖ್ಯೆ
ಬೆಂಗಳೂರಿನಲ್ಲಿ ಶುಕ್ರವಾರ ಒಟ್ಟು 2,452 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84,185ಕ್ಕೆ ತಲುಪಿದೆ. ಇಂದು ಕೇವವಲ 463 ಜನರಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ35,117ಕ್ಕೆ ಏರಿಕೆಯಾಗಿದೆ.

ಒಟ್ಟು 22 ಜನರು ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,360ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಚೇತರಿಕೆ ಪ್ರಮಾಣ ಶೇ.5667 ಆಗಿದ್ದರೆ, ಸಾವಿನ ಪ್ರತಿಶತ ಶೇ.162 ಆಗಿದೆ.