Asianet Suvarna News Asianet Suvarna News

3 ದಿನಗಳ ಬಳಿಕ ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ಇಬ್ಬರು ಸೋಂಕಿತರು ಸಾವು

ಸತತ ಮೂರು ದಿನಗಳ ಇಳಿಕೆ ಬಳಿಕ ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ಏರಿಕೆಯಾಗಿದ್ದು, ಮಂಗಳವಾರ 839 ಜನರಲ್ಲಿ ಕೊರೋನಾ ದೃಢಪಟ್ಟಿದ್ದು, 913 ಮಂದಿ ಗುಣಮುಖರಾಗಿದ್ದಾರೆ. 

839 new coronavirus cases on july 5th in karnataka gvd
Author
Bangalore, First Published Jul 6, 2022, 4:30 AM IST

ಬೆಂಗಳೂರು (ಜು.06): ಸತತ ಮೂರು ದಿನಗಳ ಇಳಿಕೆ ಬಳಿಕ ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ಏರಿಕೆಯಾಗಿದ್ದು, ಮಂಗಳವಾರ 839 ಜನರಲ್ಲಿ ಕೊರೋನಾ ದೃಢಪಟ್ಟಿದ್ದು, 913 ಮಂದಿ ಗುಣಮುಖರಾಗಿದ್ದಾರೆ. ಕಲಬುರಗಿಯಲ್ಲಿ 33 ವರ್ಷದ ಪುರುಷ, ಕೋಲಾರದಲ್ಲಿ 85 ವರ್ಷದ ವೃದ್ಧ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ 6398 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ/ಆರೈಕೆಯಲ್ಲಿದ್ದಾರೆ. 

84 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.4 ರಷ್ಟು ದಾಖಲಾಗಿದೆ. ಸೋಮವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಆರು ಸಾವಿರ ಹೆಚ್ಚು ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು ಕೂಡಾ 90 ಹೆಚ್ಚಳವಾಗಿವೆ.(ಸೋಮವಾರ 749, ಸಾವು ಒಂದು). ಸಕ್ರಿಯ ಸೋಂಕಿತರ ಪೈಕಿ 97 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, 6301 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. ರಾಜ್ಯದಲ್ಲಿ ಈವರೆಗೆ 39.7 ಲಕ್ಷ ಸೋಂಕು ಪ್ರಕರಣಗಳು ವರದಿಯಾಗಿದ್ದು, 39.2 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 40,080 ಮಂದಿ ಸಾವಿಗೀಡಾಗಿದ್ದಾರೆ.

Covid Crisis: ಮಾಸ್ಕ್‌ ಧರಿಸದವರಿಗೆ ದಂಡ ಹಾಕಿ: ತಜ್ಞರು

ಎಲ್ಲಿ ಎಷ್ಟು ಮಂದಿಗೆ ಸೋಂಕು: ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 775 ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ 17, ಬೆಂಗಳೂರು ಗ್ರಾಮಾಂತರ 6, ಬೆಳಗಾವಿ, ಧಾರವಾಡ, ಮೈಸೂರಿನಲ್ಲಿ ತಲಾ ನಾಲ್ಕು, ಕೋಲಾರ, ಕಲಬುರಗಿ, ಬಳ್ಳಾರಿ, ತುಮಕೂರು, ಉಡುಪಿ, ಉತ್ತರ ಕನ್ನಡಲ್ಲಿ ತಲಾ ಮೂರು, ಹಾಸನ ಮತ್ತು ರಾಯಚೂರಿನಲ್ಲಿ ಇಬ್ಬರಿಗೆ, ಬೀದರ್‌, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಮಾತನಾಡುವವನಿಗಿಂತ ಮೌನಿಗೆ ಕೋವಿಡ್‌ ಸಾಧ್ಯತೆ: ಇಬ್ಬರು ವ್ಯಕ್ತಿಗಳು ಮಾಸ್ಕ್‌ ಇಲ್ಲದೆ ಮಾತುಕತೆಯಲ್ಲಿ ತೊಡಗಿದ್ದಾಗ ಒಬ್ಬ ವ್ಯಕ್ತಿ ಮಾತ್ರ ಮಾತನಾಡುತ್ತಿದ್ದು, ಮತ್ತೊಬ್ಬ ವ್ಯಕ್ತಿ ಮೌನವಾಗಿದ್ದರೆ ಮೌನವಾಗಿರುವ ವ್ಯಕ್ತಿಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಇಬ್ಬರೂ ವ್ಯಕ್ತಿಗಳು ಮಾತನಾಡುತ್ತಿದ್ದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂಬ ಹೊಸ ವಿಷಯವನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ವಿಜ್ಞಾನಿಗಳು ಸಂಶೋಧನೆಯಲ್ಲಿ ಕಂಡುಕೊಂಡಿದ್ದಾರೆ.

ರಾಜ್ಯಗಳಿಗೆ ಮತ್ತಷ್ಟು ಕೋವಿಡ್‌ ಮುನ್ನೆಚ್ಚರಿಕೆ ಸೂಚನೆ: ಕೇಂದ್ರ ಸರ್ಕಾರ ತಾಕೀತು

ನಾಲ್ಕು ಅಡಿ ಅಂತರದಲ್ಲಿ ನಿಂತು ವ್ಯಕ್ತಿಗಳು ಪರಸ್ಪರ ಮಾತನಾಡುತ್ತಿದ್ದಾಗ ಎಂಜಲಿನ ಸಣ್ಣ ಹನಿ (ಡ್ರಾಪ್‌ಲೆಟ್‌) ಹರಡುವ ರೀತಿ ಬಗ್ಗೆ ವಿಶೇಷ ಅಧ್ಯಯನ ನಡೆಸಿದ್ದಾರೆ. ಈ ಅಧ್ಯಯನದ ಪ್ರಕಾರ ಇಬ್ಬರು ವ್ಯಕ್ತಿಗಳು ಮಾತನಾಡುವಾಗ ಪರಸ್ಪರ ಕಣ್ಣಿನ ಸಂಪರ್ಕ ಇಟ್ಟುಕೊಂಡೆ ತಲೆಯನ್ನು ಪರಸ್ಪರ ವಿರುದ್ಧ ದಿಕ್ಕಿಗೆ 9 ಡಿಗ್ರಿ ವಾಲಿಸಿ ಮಾತನಾಡಿದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂದಿದ್ದಾರೆ. ಕೊರೋನಾ ಸೋಂಕು ಗಾಳಿಯ ಮೂಲಕ ಹರಡುತ್ತದೆ ಎಂಬ ಕಾರಣಕ್ಕೆ ಮಾಸ್ಕ್‌ ಹಾಗೂ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.

Follow Us:
Download App:
  • android
  • ios